ಪರಿಶ್ರಮಕ್ಕೆ ಸಂದ ಗೌರವ -ಅನಸೂಯ ಮದನಬಾವಿ

Must Read

ಮುನವಳ್ಳಿ- ಸಮಾಜದಲ್ಲಿ ತಮ್ಮ ಅವಿರತ ಸೇವೆ ಸಲ್ಲಿಸಿರುವ ತಲ್ಲೂರು ರಾಯನಗೌಡರ ಕುರಿತು ಸಂಶೋಧನೆ ಕೈಗೊಳ್ಳುವ ಮೂಲಕ ಅವರ ವ್ಯಕ್ತಿತ್ವದ ವಿಭಿನ್ನ ನೆಲೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ವೈ ಬಿ ಕಡಕೋಳ ಅವರ ಪರಿಶ್ರಮ ನಿಜಕ್ಕೂ ಶ್ಲಾಘನೀಯ ಇಂತಹ ಪರಿಶ್ರಮದ ಕಾರ್ಯ ಅಭಿನಂದನಾರ್ಹ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಹಿಳಾ ನಿರ್ದೇಶಕಿ ಅನಸೂಯ ಮದನಬಾವಿ ಅಭಿಪ್ರಾಯ ಪಟ್ಟರು.

ಅವರು ಶಿಕ್ಷಕ ಸಾಹಿತಿ ವೈ ಬಿ ಕಡಕೋಳ ಇತ್ತೀಚೆಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ದ ಕನ್ನಡ ಅಧ್ಯಯನ ಪೀಠದಲ್ಲಿ ಡಾ. ಮಹೇಶ ಗಾಜಪ್ಪನವರ ಅವರ ಮಾರ್ಗದರ್ಶನದಲ್ಲಿ ಸಲ್ಲಿಸಿದ ತಲ್ಲೂರು ರಾಯನಗೌಡರು ಸಮಗ್ರ ಅಧ್ಯಯನ ವಿಷಯದಲ್ಲಿ ಮಂಡಿಸಿದ ಪ್ರಬಂಧಕ್ಕೆ ಡಾಕ್ಟರೇಟ್ ಪಡೆದ ಪ್ರಯುಕ್ತ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು

ಈ ಸಂದರ್ಭದಲ್ಲಿ ಅಂಚೆ ಇಲಾಖೆಯ ರಾಜು ಹಟ್ಟಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪ್ರತಿನಿಧಿ ಆರ್ ಎಸ್ ನೀಲೂಗಲ್, ಗುರು ಮಾತೆ ಶಿಲ್ಪಾ ವಡವಡಗಿ, ಅರಟಗಲ್ ಗ್ರಾಮದ ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಜಿ. ಪಿ ಅವತಾರಿ ಉಪಸ್ಥಿತರಿದ್ದರು.

ಶಿಲ್ಪಾ ವಡವಡಗಿ ಕಾರ್ಯ ಕ್ರಮ ನಿರೂಪಿಸಿದರು. ನೀಲೂಗಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿ ಪಿ ಅವತಾರಿ ವಂದಿಸಿದರು

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group