spot_img
spot_img

ಸಂವಿಧಾನವನ್ನು ಎಲ್ಲರೂ ಗೌರವಿಸಿ: ಮಹಾಂತೇಶ ಕುಡಚಿ

Must Read

spot_img

ಗೋಕಾಕ : ವಿಶ್ವದಲ್ಲಿಯೇ ನಮ್ಮ ದೇಶದ ಸಂವಿಧಾನವು ಅತೀ ದೊಡ್ಡದಾಗಿದೆ ಎಂದು ಅರಭಾವಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಕುಡಚಿ ಹೇಳಿದರು.

ಶುಕ್ರವಾರದಂದು ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ಅವರು ಸಂವಿಧಾನವನ್ನು ರಚಿಸಿ ಎಲ್ಲ ವರ್ಗಗಳಿಗೆ ಮೀಸಲಾತಿ ಕಲ್ಪಿಸಿಕೊಟ್ಟ ಮಹಾನುಭಾವರೆಂದು ಹೇಳಿದರು.

ಭಾರತ ರತ್ನ ಡಾ. ಬಾಬಾಸಾಹೇಬ ಅಂಬೇಡ್ಕರ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ದೇಶಕ್ಕೆ ಎಲ್ಲರೂ ಒಪ್ಪುವಂತಹ ಸಂವಿಧಾನವನ್ನು ರಚಿಸಿಕೊಟ್ಟಿರುವ ಡಾ. ಅಂಬೇಡ್ಕರ ಅವರ ಬಗ್ಗೆ ಪ್ರತಿಯೊಬ್ಬರೂ ಗೌರವಾಭಿಮಾನ ಹೊಂದಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಯುವ ಮುಖಂಡ ನಾಗಪ್ಪ ಶೇಖರಗೋಳ, ಅರಭಾವಿ ಬಿಜೆಪಿ ಎಸ್‍ಸಿ ಮೋರ್ಚಾ ಅಧ್ಯಕ್ಷ ನಾಗರಾಜ್ ಕುದರಿ, ಜಿಲ್ಲಾ ಎಸ್‍ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಈರಪ್ಪ ಢವಳೇಶ್ವರ, ಪಾಂಡು ಮಹೇಂದ್ರಕರ, ಜಿಲ್ಲಾ ಉಪಾಧ್ಯಕ್ಷ ಯಮನಪ್ಪ ಮೇತ್ರಿ, ಮಂಗಲಾ ಕೌಜಲಗಿ, ಕಮಲಾದೇವಿ ಬಡಗಾಂವಿ, ಸಂಜೀವ ಹೊಸಮನಿ, ಯಲ್ಲಪ್ಪ ಭಜಂತ್ರಿ, ಕೃಷ್ಣಾ ಬಂಡಿವಡ್ಡರ, ರಮೇಶ ಹರಿಜನ, ಬಿಜೆಪಿ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನಾಗಪ್ಪ ಶೇಖರಗೋಳ ಅವರು ಡಾ. ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

- Advertisement -
- Advertisement -

Latest News

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

ಬೆಂಗಳೂರು- ಶ್ರವಣ ಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಜೈನ್ ಸಮುದಾಯದ ಸಮಗ್ರ...
- Advertisement -

More Articles Like This

- Advertisement -
close
error: Content is protected !!