- Advertisement -
ಬೀದರ – ಅಂಗನವಾಡಿಯೊಂದರಲ್ಲಿ ಕಳಪೆ ಆಹಾರ ಸೇವನೆ ಮಾಡಿ ಅಸ್ವಸ್ಥಗೊಂಡ ೧೨ ಮಕ್ಕಳು ಎಂಬ ತಲೆಬರಹದಡಿ ಪ್ರಕಟಗೊಂಡ ವರದಿಗೆ ಸ್ಪಂದಿಸಿರುವ ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಯವರು ತಮ್ಮ ಫೇಸ್ ಬುಕ್ ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಕ್ಷೇತ್ರದ ತರನಳ್ಳಿ ಗ್ರಾಮದ ಅಂಗನವಾಡಿಯೊಂದರಲ್ಲಿ ಊಟದ ನಂತರ ೧೨ ಮಕ್ಕಳು ಅಸ್ವಸ್ಥಗೊಂಡಿದ್ದು ತಿಳಿದು ದುಃಖವಾಯಿತು.
ಈ ಸಂಬಂಧ ಕೂಡಲೆ ಅಧಿಕಾರಿಗಳ ಜೊತೆ ಮಾತನಾಡಿ ಮಕ್ಕಳಿಗೆ ಆಸ್ಪತ್ರೆಗೆ ದಾಖಲಿಸಿ ಉತ್ತಮ ಚಿಕಿತ್ಸೆ ನೀಡಲು ಸೂಚಿಸಿದ್ದು ಮಕ್ಕಳು ಈಗಾಗಲೇ ಚೇತರಿಸಿಕೊಂಡಿದ್ದು ಯಾವುದೇ ಆತಂಕ ಪಡುವ ಅಗತ್ಯವಿಲ್ಲ.
- Advertisement -
ಈ ನಿರ್ಲಕ್ಷ್ಯತನಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚಿಸಿದ್ದೇನೆ ಎಂಬುದಾಗಿ ಖಂಡ್ರೆಯವರು ಫೇಸ್ ಬುಕ್ ನಲ್ಲಿ ಬರೆದುಕೊಂಡು Times of ಕರ್ನಾಟಕ ವೆಬ್ ಪತ್ರಿಕೆಯ ಲೋಗೊ ಹಂಚಿಕೊಂಡಿದ್ದಾರೆ.
ವರದಿ: ನಂದಕುಮಾರ ಕರಂಜೆ, ಬೀದರ