ಅಂಕಲಗಿ ಪೂಜ್ಯರು ವಿಧಿವಶ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

Must Read

ಗೋಕಾಕ– ತಾಲೂಕಿನ ಸುಕ್ಷೇತ್ರ ಅಂಕಲಗಿ ಅಡವಿ ಸಿದ್ಧೇಶ್ವರ ಮಠದ ಪೀಠಾಧಿಪತಿಯಾಗಿದ್ದ ಗುರು ಸಿದ್ಧೇಶ್ವರ ಮಹಾಸ್ವಾಮಿಗಳ ನಿಧನಕ್ಕೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ.

ಅಂಕಲಗಿ ಮಠವು ಬೆಳಗಾವಿ ನಾಡಿನಲ್ಲಿ ವಿಶಿಷ್ಟ ಇತಿಹಾಸ, ಭವ್ಯ ಪರಂಪರೆಯನ್ನು ಹೊಂದಿದೆ. ಮಠದ ಸರ್ವತೋಮುಖ ಬೆಳವಣಿಗೆಗಳಲ್ಲಿ ಶ್ರೀ ಗಳ ಪಾತ್ರ ಗಣನೀಯವಾಗಿತ್ತು.

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅಪ್ರತಿಮ ಸೇವೆಯನ್ನು ಸಲ್ಲಿಸಿದ್ದರು. ಭಕ್ತರ ಪಾಲಿಗೆ ಪೂಜ್ಯನೀಯವಾಗಿತ್ತು. ಅನೇಕ ಪವಾಡಗಳಿಗೆ ಶ್ರೀ ಮಠವು ಹೆಸರುವಾಸಿಯಾಗಿದೆ.

ಪೂಜ್ಯ ಶ್ರೀ ಗಳನ್ನು ಭಕ್ತರು ನಡೆದಾಡುವ ದೇವರು ಕರೆಯುತ್ತಿದ್ದರು. ಶ್ರೀ ಗಳ ನಿಧನದಿಂದ ಇಡೀ ನಾಡೇ ಬಡವಾಗಿದೆ. ಅಸಂಖ್ಯಾತ ಭಕ್ತರಿಗೆ ಶ್ರೀ ಗಳ ನಿಧನದ  ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ.

ಶ್ರೀ ಗಳ ದಿವ್ಯಾತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

Latest News

ಎಕ್ಸ್ ಪ್ರೆಸ್ ರೈಲುಗಳನ್ನು ಘಟಪ್ರಭಾ ಸ್ಟೇಶನ್ ನಿಲುಗಡೆಗೆ ಮನವಿ

ಮೂಡಲಗಿ: ಗೋಕಾಕ, ಮೂಡಲಗಿ, ಯರಗಟ್ಟಿ, ಹುಕ್ಕೇರಿ ಹಾಗೂ ಚಿಕ್ಕೋಡಿ ತಾಲೂಕುಗಳ ಅನೇಕ ಸೈನಿಕರು ಭಾರತದ ವಿವಿಧ ರಾಜ್ಯಗಳಲ್ಲಿ ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಸೈನಿಕರು ರಜೆಯ ಸಮಯದಲ್ಲಿ...

More Articles Like This

error: Content is protected !!
Join WhatsApp Group