ಮೂಡಲಗಿ: ಗೋಕಾಕ ನಗರದ ಆರ್.ಎಸ್.ಎಸ್ನ ಹಿರಿಯ ಕಾರ್ಯಕರ್ತರಾಗಿದ್ದ ನಾಗಪ್ಪ ಚಿಪ್ಪಲಕಟ್ಟಿ ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಕುಟುಂಬಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದರು.
ಶನಿವಾರ ಮೇ-21 ರಂದು ಪತ್ರಿಕಾ ಹೇಳಿಕೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ನಾಗಪ್ಪ ಚಿಪ್ಪಲಕಟ್ಟಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜವಾಬ್ದಾರಿಯುತ ಕಾರ್ಯಕರ್ತರಾಗಿದ್ದರು. ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಂಥ ಹಿರಿಯ ಜೀವಿ ಅವರಾಗಿದ್ದರು. ಅವರನ್ನು ಕಳೆದುಕೊಂಡು ಗೋಕಾಂವಿ ನಾಡು ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದರು.