spot_img
spot_img

ಗೋಕಾಕ ನಗರಕ್ಕೆ ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯ ಮಂಜೂರು- ಸಂಸದ ಈರಣ್ಣ ಕಡಾಡಿ ಹರ್ಷ

Must Read

- Advertisement -

ಮೂಡಲಗಿ: ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಕೋವಿಡ್-19 ಪರೀಕ್ಷೆ ಕೈಗೊಳ್ಳಲು ಗೋಕಾಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯ ಮಂಜೂರಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು.

ಮಂಗಳವಾರ ಜ.25 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಸುಮಾರು 53 ಲಕ್ಷ ಜನಸಂಖ್ಯೆ ಹೊಂದಿರುವ ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷಾ ಕೇಂದ್ರಗಳ ಕೊರತೆಯಿಂದಾಗಿ ಸಾರ್ವಜನಿಕರು ಪರದಾಡುವಂತಾಗಿದೆ. ಆ ಕಾರಣದಿಂದ ಜಿಲ್ಲಾ ಕೇಂದ್ರದಿಂದ ಸುಮಾರು 100 ಕಿ.ಮೀ ಅಂತರದಲ್ಲಿರುವ ಗೋಕಾಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷಾ ಕೇಂದ್ರ ಪ್ರಾರಂಭಿಸುವಂತೆ ಹಲವಾರು ಬಾರಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಅವರನ್ನು ಗೋಕಾಕನಲ್ಲಿ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷಾ ಕೇಂದ್ರ ಪ್ರಾರಂಭಿಸುವಂತೆ ಒತ್ತಾಯ ಮಾಡಲಾಗಿತ್ತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ. ಕೆ.ಸುಧಾಕರ ಇವರುಗಳ ನೇತೃತ್ವದಲ್ಲಿ ಬೆಳಗಾವಿಯ ಸುರ್ವರ್ಣ ಸೌಧದಲ್ಲಿ ಜರುಗಿದ ಕೋವಿಡ್ ನಿಯಂತ್ರಣ ಮತ್ತು ಪರಿಶೀಲನಾ ಸಭೆಯಲ್ಲಿ ಗೋಕಾಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷಾ ಕೇಂದ್ರ ಪ್ರಾರಂಭಿಸುವಂತೆ ಒತ್ತಾಯಿಸಲಾಗಿತ್ತು. ಸಭೆ ಮುಗಿದ ನಂತರ ಅಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಭೌಗೋಳಿಕವಾಗಿ ಬೆಳಗಾವಿ ಜಿಲ್ಲೆ ಬಹಳ ದೊಡ್ಡದಾದ ಕಾರಣ ಹಾಗೂ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಕಾರಣ ಕೋವಿಡ್ ಪರೀಕ್ಷಾ ಫಲಿತಾಂಶಗಳು ಸಾರ್ವಜನಿಕರಿಗೆ ವಿಳಂಬವಾಗಿ ತಲುಪುತ್ತಿರುವ ಕಾರಣದಿಂದ ತುಂಬಾ ತೊಂದರೆಯಾಗುತ್ತಿದೆ. ಆದಕಾರಣ ಗೋಕಾಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಅತಿ ಶೀಘ್ರದಲ್ಲಿ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷಾ ಕೇಂದ್ರ ಪ್ರಾರಂಭಿಸುವುದಾಗಿ ಘೋಷಣೆ ಮಾಡಿದ್ದರು.

- Advertisement -

ಗೋಕಾಕನಲ್ಲಿ ಪ್ರಾರಂಭ ಮಾಡುವ ಮುಖಾಂತರ ಕೋವಿಡ್ ಉಪಟಳದಿಂದ ಭಾದಿತರಾಗುತ್ತಿರುವ ಜಿಲ್ಲೆಯ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಜನರ ಸಹಾಯಕ್ಕೆ ಬಂದ ಸರ್ಕಾರಕ್ಕೆ ಮತ್ತು ಜಿಲ್ಲಾಡಳಿತ ಅಭಿನಂದಿಸುವುದಾಗಿ ತಿಳಿಸಿದ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ. ಕೆ. ಸುಧಾಕರ ಅವರು ತಕ್ಷಣ ಕ್ರಮವನ್ನು ತೆಗೆದುಕೊಂಡ ನಿರ್ಧಾರಕ್ಕೆ ಸ್ವಾಗತಿಸುವುದಾಗಿ ಈರಣ್ಣ ಕಡಾಡಿ ತಿಳಿಸಿದರು.

- Advertisement -
- Advertisement -

Latest News

ಇದು ಇಂದಿನ ಹಾಸ್ಟೆಲ್ ಹುಡುಗ ಹುಡುಗಿಯರಿಗೆ ನಾವೆಲ್ಲ ಹೇಳಬೇಕಾದ ಖಾಸ್ ಬಾತ್

ಸರ್... ಓ ಸರ್...ಕಾಂಬಳೆ ಸರ್  ... ಸರ್ ನಮಸ್ಕಾರ್ರಿ ಆರಾಮ ಅದೀರಿ?? ನಾ ಯಾರ್ ಹೇಳ್ರಿ ಅನ್ನುತ್ತಿದ್ದಂತೆಯೇ ನಿವೃತ್ತಿ ಹೊಂದಿ ಐದಾರು ವರ್ಷ ಆಗಿದ್ದ ಬಿಸಿಎಮ್...
- Advertisement -

More Articles Like This

- Advertisement -
close
error: Content is protected !!
Join WhatsApp Group