- Advertisement -
ಬೆಳಗಾವಿ – ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಈಡೇರಿಸಲು ನಡೆಸಿದ ಮುಷ್ಕರದಿಂದಾಗಿ ಬೆಳಗಾವಿ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆಯಲ್ಲಿ ತೊಂದರೆ ಉಂಟಾಗಿದ್ದು ವಿಷಾದನೀಯವಾಗಿದೆ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸರಿ ಪಡಿಸಿದ್ದು ಹಾಗೂ ಸಾಮಾನ್ಯ ಸ್ಥಿತಿಗೆ ಬಂದಿರುತ್ತದೆ ಎಂದು ಬೆಳಗಾವಿ ಮಹಾನಗರಪಾಲಿಕೆ ಆಯುಕ್ತರಾದ ರುದ್ರೇಶ್ ಘಾಳೆ ಅವರು ಹೇಳಿದ್ದಾರೆ.
ಇನ್ನು ಮುಂದೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಲಾಗುವುವುದು ಎಂದು ಅವರು ಪತ್ರಕರ್ತರಿಗೆ ತಿಳಿಸಿದರು.
ಬೆಳಗಾವಿ ನಗರ ಪ್ರದೇಶಗಳಲ್ಲಿ ಅವೈಜ್ಞಾನಿಕವಾಗಿ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಾ ಇರುವುದು ಗಮನಕ್ಕೆ ಬಂದಿದೆ.ಈ ಸಮಸ್ಯೆಗೆ ಶೀಘ್ರ ಇತಿಶ್ರೀ ಹಾಡಲು ಪ್ರಯತ್ನಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಮಾಹಿತಿ ನೀಡಿದರು.