spot_img
spot_img

ಹರ್ ಘರ್ ತಿರಂಗಾ ರಾಷ್ಟ್ರ ಧ್ವಜಕ್ಕೆ ಚಾಲನೆ

Must Read

spot_img

ಬೀದರ: ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಪ್ರತಿ ಮನೆಗೂ ರಾಷ್ಟ್ರಧ್ವಜ ಹಾರಿಸಬೇಕೆಂಬ ಕಾರ್ಯಕ್ರಮದ ಅಡಿಯಲ್ಲಿ ಶಿವಕುಮಾರ್ ಸ್ವಾಮಿ ನೇತೃತ್ವದಲ್ಲಿ ರಾಷ್ಟ್ರಧ್ವಜಕ್ಕೆ ಚಾಲನೆ ನೀಡಲಾಯಿತು.

ರಾಷ್ಟ್ರಗೀತೆ ಹಾಡುವ ಮೂಲಕ ಶಿವಕುಮಾರ್ ಸ್ವಾಮೀಜಿ ಚಾಲನೆ ನೀಡಿದರು. ಶಾಲೆ ಮಕ್ಕಳು ರಾಷ್ಟ್ರ ಧ್ವಜ ಹಾರಿಸಿ ಭಾರತ ಮಾತಾ ಕೀ ಜೈ ಎಂದು ಘೋಷಣೆ ಕೂಗಿದರು.

ಶಾಲೆ ಮಕ್ಕಳಿಗೆ ಧ್ವಜವನ್ನು ಮನೆಗೆ ತೆಗೆದುಕೊಂಡು ಹೋಗಿ ರಾಷ್ಟ್ರ ಧ್ವಜ ನಿಮ್ಮ ಮನೆ ಮೇಲೆ ಹಾರಿಸಬೇಕು ಎಂದು ಸ್ವಾಮೀಜಿ ಹೇಳಿದರು.

ಇನ್ನು ಭಾಲ್ಕಿ ತಾಲೂಕಿನಲ್ಲಿ ಕೂಡ ಒಂದು ಕಿಲೋಮೀಟರ್ ಉದ್ದದ ಧ್ವಜ ದೊಂದಿಗೆ ಚಾಲನೆ ನೀಡಿದ ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ.

ಈ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಶಾಲೆ ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು, ದೇಶ ಪ್ರೇಮಿಗಳು ಭಾಗವಹಿಸಿದ್ದರು.

ಪಟ್ಟಣದ ಬಿ ಕೆ ಐ ಟಿ ಇಂಜಿನಿಯರಿಂಗ್ ಕಾಲೇಜಿನಿಂದ ತಹಶೀಲ್ದಾರರ ಕಚೇರಿ ಟೌನ್ ಹಾಲ್ ವರೆಗೆ ಸುಮಾರು ಎರಡು ಕಿಲೋಮೀಟರ್ ವಾಕಥಾನ್ ನಡೆಯಿತು.

ಬೀದರ್ ಜಿಲ್ಲಾದ್ಯಂತ ಆಜಾದಿ ಕಾ ಅಮೃತ ಮಹೋತ್ಸವ ಸಂದರ್ಭದಲ್ಲಿ ಬೀದರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬೀದರ್ ಕೆಲವು ಅಧಿಕಾರಿ ಮತ್ತು ರಾಜಕೀಯ ನಾಯಕರು ಈ ರಾಷ್ಟ್ರ ಧ್ವಜ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬೀದರ್ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಾಬು ವಾಲಿ, ಬೀದರ್ ಜಿಲ್ಲೆಯ ಅಪರ ಜಿಲ್ಲಾ ಅಧಿಕಾರಿ ಮತ್ತು ವರಿಷ್ಠ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸಾಹಿತ್ಯ ಕ್ಷೇತ್ರದಲ್ಲಿ ರಶ್ಮಿಯಾಗಿ ಹೊಳೆದ ವಿ.ಕೃ.ಗೋಕಾಕ್!

ಬೇರೆಯವರ ಮೇಲೆ ಅವಲಂಬಿತವಾದ ಬದುಕು, ಸಾಧನೆ “ಮರವನ್ನು ಆಶ್ರಯಿಸಿ ಬೆಳೆದ ಬಳ್ಳಿಯಂತೆ” ಆಶ್ರಯ ತಪ್ಪಿದಾಗ ಅದು ನೆಲಕಚ್ಚುವುದು ಎಂದವರು ವಿನಾಯಕ ಕೃಷ್ಣ ಗೋಕಾಕ್ (ವಿ.ಕೃ.ಗೋಕಾಕ್). ಕನ್ನಡಕ್ಕೆ...
- Advertisement -

More Articles Like This

- Advertisement -
close
error: Content is protected !!