ಸಿಂದಗಿ: ವಿಜಯಪುರ ತಾಲೂಕಿನ ಕೂಡಗಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮದಲ್ಲಿ ಮಾತೃಶ್ರೀ ಸಿದ್ದಮ್ಮ ಗುರುಕುಲ ಕಲಾ ವಾಣಿಜ್ಯ ಮತ್ತು ವಿಜ್ಞಾನ ಪದವಿಪೂರ್ವ ಕಾಲೇಜು, ಸಿಂದಗಿ ಕಾಲೇಜಿನ ವಾಣಿಜ್ಯ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ರೂಪಾ ಗೊಟಗುಣಕಿ ಚರ್ಚಾ ಸ್ಪರ್ಧೆ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾಳೆ.
ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ್ ಪೂಜಾರಿ ಮತ್ತು ಕಾಲೇಜಿನ ಪ್ರಾಚಾರ್ಯರು ಹಾಗೂ ಉಪನ್ಯಾಸಕ ಬಳಗದವರು ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.