spot_img
spot_img

ತಂತ್ರಜ್ಞಾನದಲ್ಲಿ ಗ್ರಾಮೀಣ ಕಲೆಗಳು ಮಾಯ – ಶಾಸಕ ಯಾದವಾಡ ಕಳವಳ

Must Read

spot_img
- Advertisement -

ರಾಮದುರ್ಗ – ಜಾನಪದ ಕಲೆಗಳು ಜನರ ಬದುಕಿನ ಅವಿಭಾಜ್ಯ ಅಂಗವಾಗಿದ್ದು ಅಳಿವಿನ ಅಂಚಿನಲ್ಲಿರುವ ಕಲೆಗಳನ್ನು ರಕ್ಷಿಸುವ ಸಲುವಾಗಿ ಸರ್ಕಾರ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಕಲಾವಿದರು ಇವುಗಳಲ್ಲಿ ಭಾಗವಹಿಸಿ ಕಲಾ ಪ್ರದರ್ಶನ ನೀಡಬೇಕೆಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.

ತಾಲೂಕಿನ ಗೊಡಚಿ ಗ್ರಾಮದ ರಾಮೇಶ್ವರ ರಂಗಮಂದಿರದಲ್ಲಿ ಬೆಳಗಾವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಗಿರಿಜನ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ತಂತ್ರಜ್ಞಾನ ಯುಗದಲ್ಲಿ ಗ್ರಾಮೀಣ ಕಲೆಗಳು ಮಾಯವಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ತಾಲೂಕಿನಲ್ಲಿ ವೈವಿಧ್ಯಮಯ ಜನಪದ ಕಲಾತಂಡಗಳಿದ್ದು ಅವರ ಕಲಾಪ್ರದರ್ಶನಕ್ಕೆ ಸರಿಯಾದ ವೇದಿಕೆಗಳಿಲ್ಲದೆ ಕಲಾವಿದರು ಎಲೆಯ ಮರೆಯ ಕಾಯಿಯಂತೆ ಉಳಿದುಕೊಂಡಿದ್ದಾರೆ ಅವರಿಗೆ ಇದು ಸೂಕ್ತ ವೇದಿಕೆಯಾಗಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ಪಾಂಡುರಂಗ ಜಟಗನ್ನವರ ತಿಳಿಸಿದರು.

- Advertisement -

ನಮ್ಮ ನಾಡಿನ ಶ್ರೀಮಂತ ಜಾನಪದ ಕಲೆಗಳನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು ಸರ್ಕಾರ ಕಲೆಗಳನ್ನು ರಕ್ಷಿಸಲು ವಿಶೇಷ ಯೋಜನೆ ರೂಪಿಸಿ ಅನುಷ್ಠಾನಗೊಳಿಸುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ವಿದ್ಯಾವತಿ ಬಿ.ಎಚ್ ಅವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಗೊಡಚಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಈರಪ್ಪ ಗೊರವ ಮಾತನಾಡಿ, ಪ್ರತಿ ಗ್ರಾಮದಲ್ಲಿ ಕಲಾವಿದರು ಇದ್ದಾರೆ. ಕಲೆಯನ್ನೇ ನಂಬಿ ಜೀವನ ನಡೆಸುವವರು ಇದ್ದಾರೆ. ಅವರನ್ನು ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಗ್ರಾಪಂ ಉಪಾಧ್ಯಕ್ಷೆ ರೇಣವ್ವ ಭಜಂತ್ರಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ.ಎ‌ಸ್.ಯಾದವಾಡ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದೆ ಡಾ.ಲಕ್ಷ್ಮೀಬಾಯಿ ನೀಲಪ್ಪನವರ, ಉಪತಹಸೀಲ್ದಾರ್ ಆರ್.ಎಸ್.ಘೋರ್ಪಡೆ, ಮುಖ್ಯೋಪಾಧ್ಯಾಯಿನಿ ಎಸ್.ವಿ.ಮಾಶಾಳೆ. ಇತರರು ವೇದಿಕೆಯಲ್ಲಿದ್ದರು.

- Advertisement -

ಜಿಲ್ಲೆಯ ಬೇರೆ ಬೇರೆ ತಾಲೂಕಿನ ೧೨ ಕ್ಕೂ ಹೆಚ್ಚು ಕಲಾ ತಂಡಗಳು ತಮ್ಮ ಕಲಾಪ್ರದರ್ಶನ ನೀಡಿದವು.

- Advertisement -
- Advertisement -

Latest News

೧೫ ನೇ ಅಂತರ ತೋಟಗಾರಿಕೆ ಮಹಾವಿದ್ಯಾಲಯಗಳ ಅಥ್ಲೆಟಿಕ್ಸ ಕ್ರೀಡಾಕೂಟ 

ದಾನವೀರ ಶ್ರೀ ಶಿರಸಂಗಿ ಲಿಂಗರಾಜ ದೇಸಾಯಿ, ಆಹಾರ ಅಭಿಯಂತ್ರಿಕ ತೋಟಗಾರಿಕೆ ಮಹಾವಿದ್ಯಾಲಯ, ದೇವಿಹೊಸುರ, ಹಾವೇರಿಯಲ್ಲಿ ನಡೆದ ೧೫ ನೇ ಅಂತರ ತೋಟಗಾರಿಕೆ ಮಹಾವಿದ್ಯಾಲಯಗಳ ಅಥ್ಲೇಟಿಕ್ಸ ಕ್ರೀಡಾ...
- Advertisement -

More Articles Like This

- Advertisement -
close
error: Content is protected !!
Join WhatsApp Group