ಗ್ರಾಮೀಣ ಪ್ರದೇಶದ ಮಕ್ಕಳೇ ನಿಜವಾದ ಬುದ್ದಿವಂತರು: ಕುಂ. ವೀರಭದ್ರಪ್ಪ

Must Read

ಮೂಡಲಗಿ: ಯಾವ ಶಿಕ್ಷಣ ಸಂಸ್ಥೆಯಲ್ಲಿ ಹೆಣ್ಣು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕಲಿಯುತ್ತಾರೆಯೋ ಆ ಸಂಸ್ಥೆಗೆ ಒಳ್ಳೆಯ ಭವಿಷ್ಯವಿದೆ. ಹೆಣ್ಣಿಲ್ಲದೇ ಪ್ರಪಂಚವೇ ಇಲ್ಲ ಎಂದು ಕೇಂದ್ರ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಕುಂ. ವೀರಭದ್ರಪ್ಪ ಹೇಳಿದರು.

ಅವರು ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕುಂ.ವೀರಭದ್ರಪ್ಪ ಅವರ ಜೊತೆ ಮಾತು-ಕತೆ‌ ಎಂಬ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಗರ ಪ್ರದೇಶದ ಹುಡುಗರಿಗೆ ನೆಲಮೂಲದ ಜ್ಞಾನವಿಲ್ಲ. ಗ್ರಾಮೀಣ ಪ್ರದೇಶದ ಮಕ್ಕಳು ಬುದ್ಧಿವಂತರಾಗಿರುತ್ತಾರೆ. ಯಾವ ಮಗು ಕೆಲಸ ಮಾಡುತ್ತಾ ಶ್ರಮದ ಶಿಕ್ಷಣ ಪಡೆಯುತ್ತದೆ ಆ ಮಗು ಜೀವನದಲ್ಲಿ ಯಶಸ್ವಿಯಾಗುತ್ತದೆ. ವಿದ್ಯೆಯ ಕಡೆಗೆ ಹೆಚ್ಚಿನ ಗಮನಕೊಡಬೇಕು. ಮೋಬೈಲ್ ದಿಂದ ದೂರವಿರಬೇಕು ಎಂದು‌ ಕರೆ ನೀಡಿದರು.

ಇಂ.ಗಾಂ.ರಾ.ಕ.ಕೇಂದ್ರ ಬೆಂಗಳೂರು ಸಚಿವಾಲಯದ ಪ್ರಾದೇಶಿಕ ನಿರ್ದೇಶಕರಾದ ಡಿ. ಮಹೇಂದ್ರ ಮಾತನಾಡಿ, ನಾನು ಸಾಧಿಸಿಯೇ ತಿರುತ್ತೇನೆ ಎಂಬ ಛಲವಿರಬೇಕು. ನೋಡುವ ದೃಷ್ಠಿಕೋನ ಚನ್ನಾಗಿರಬೇಕು ಎಂದು ಹೇಳಿದರು.

ಸಂಸ್ಥೆಯ ಚೇರಮನ್ನರಾದ ಬಸಗೌಡ ಪಾಟೀಲ ಮಾತನಾಡಿದರು. ಪ್ರಾಚಾರ್ಯ ಡಾ. ಸುರೇಶ ಹನಗಂಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಜಾನಪದ ವಿದ್ವಾಂಸ‌ ಡಾ. ಸಿ.ಕೆ. ನಾವಲಗಿ, ಸಾಹಿತಿ ಜಯಾನಂದ ಮಾದರ, ಪಾರಿಜಾತ ಕಲಾವಿದ ಈಶ್ವಚಂದ್ರ ಬೆಟಗೇರಿ, ಗೋಕಾಕದ ಜೆ.ಎಸ್.ಎಸ್. ಕಾಲೇಜಿನ ಪ್ರಾಧ್ಯಾಪಕ ಉಮೇಶ ಶಾಬೋಟಿ ಇನ್ನಿತರರು ಉಪಸ್ಥಿತರಿದ್ದರು.

ಡಾ. ಕೆ.ಎಸ್. ಪರವ್ವಗೋಳ ನಿರೂಪಿಸಿದರು, ವೀಣಾ ಕಂಕಣವಾಡಿ ಪ್ರಾರ್ಥಿಸಿದರು, ಪ್ರೊ. ಡಿ.ಎಸ್. ಹುಗ್ಗಿ ಸ್ವಾಗತಿಸಿದರು, ಪ್ರೊ. ಶಂಕರ ನಿಂಗನೂರ ವಂದಿಸಿದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group