- Advertisement -
ಸಿಂದಗಿ : ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯ ಆಯೋಜಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಪ್ರಯುಕ್ತ ಪಟ್ಟಣದ ಕರ್ನಾಟಕ ಅಂಗವಿಕಲರ ಐಕ್ಯತಾ ವೇದಿಕೆಯ ರಾಜ್ಯಾಧ್ಯಕ್ಷೆ, ಸಬಿಯಾ ಬೇಗಂ ಮರ್ತೂರ ಇವರು ಅಂಗವಿಕಲರ ಕ್ಷೇತ್ರದಲ್ಲಿ ಮಾಡಿದ ವೈಯಕ್ತಿಕ ಸೇವೆಯನ್ನು ಪರಿಗಣಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಪ್ರಶಸ್ತಿ (ಇಪ್ಪತೈದು ಸಾವಿರ ನಗದು) ಫಲಕ ನೀಡಿ ಗೌರವಿಸಿದರು.
ಇದೇ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ, ಬಾಲ ವಿಕಾಸ ಅಕಾಡಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.