- Advertisement -
ಬೀದರ – ಆತ್ಮಹತ್ಯೆ ಮಾಡಿಕೊಂಡ ಸಚಿನ್ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಆತನ ಕುಟುಂಬಕ್ಕೆ ಒಂದು ಕೋಟಿ ರೂ. ಕೊಡಬೇಕು ಹಾಗೂ ಆತನ ಇಬ್ಬರು ಸೋದರಿಯರಿಗೆ ಸರ್ಕಾರಿ ನೌಕರಿ ಸಿಗಬೇಕು ಎಂದು ವಿಶ್ವಕರ್ಮ ಸಮಾಜದ ಗುರುಗಳು ಒತ್ತಾಯಿಸಿದರು.
ವಿಶ್ವಕರ್ಮ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಸಮಾಜ ಬಾಂಧವರು ಆಗ್ರಹಪಡಿಸಿದರು. ಕಟ್ಟಿ ತೂಗಾಂವ್ ಗ್ರಾಮದ ಜನರು ಹಾಗೂ ವಿಶ್ವಕರ್ಮ ಸಮಾಜದ ಬಂಧುಗಳು ಭಾಗವಹಿಸಿದ್ದರು.
ಸಮಾಜದ ಗುರುಗಳ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ಡಿಸಿ ಕಚೇರಿಯವರೆಗೆ ಮೆರವಣಿಗೆಯಲ್ಲಿ ಬಂದ ಗ್ರಾಮಸ್ಥರು ರಸ್ತೆಯುದ್ದಕ್ಕೂ ಸಚಿನ್ ಸಾವಿಗೆ ನ್ಯಾಯ ಸಿಗಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹಾಕಿದರು. ಎಲ್ಲಿಯವರೆಗೆ ಹೋರಾಟ, ಗೆಲ್ಲುವವರೆಗೆ ಹೋರಾಟ, ಸಚಿನ್ ಸಾವಿಗೆ ನ್ಯಾಯ ಬೇಕು ಎಂದು ಘೋಷಣೆ ಕೂಗಿದರು.
- Advertisement -
ವರದಿ : ನಂದಕುಮಾರ ಕರಂಜೆ, ಬೀದರ