spot_img
spot_img

ಸಾಹಿತ್ಯರತ್ನ ಅನ್ನದಾನಯ್ಯ ಪುರಾಣಿಕ ಸ್ಮಾರಕ ದತ್ತಿ ಉಪನ್ಯಾಸ

Must Read

- Advertisement -

ಗಾಂಧಿ ಶಾಂತಿ ಪ್ರತಿಷ್ಠಾನ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಮತ್ತು ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು – ಗಾಂಧಿ ಅಧ್ಯಯನ ಕೇಂದ್ರ ಹಾಗು ಸಮರ್ಪಣ – ಶೇಷಾದ್ರಿಪುರಂ ಸಂಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಈ ನಾಡು ಕಂಡ ಶ್ರೇಷ್ಠ ಮಾನವತಾವಾದಿ , ಸಾವಿರಾರು ಬಡವರಿಗೆ ನ್ಯಾಯದಾನ ಮಾಡಿದ ವಕೀಲರು, ಕನ್ನಡದ ಕೀರ್ತಿಯನ್ನು ಬೆಳಗಿದ  ಸಾಹಿತ್ಯ ರತ್ನ ಶ್ರೀ ಅನ್ನದಾನಯ್ಯ ಪುರಾಣಿಕ ಸ್ಮಾರಕ ದತ್ತಿ ಉಪನ್ಯಾಸವನ್ನು ನವೆಂಬರ್ 21ರಂದು ನಗರದ ಶೇಷಾದ್ರಿಪುರಂ ಶಿಕ್ಷಣ ದತ್ತಿ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶರವರು ವಿಶೇಷ ಆಹ್ವಾನಿತರಾಗಿ ಆಗಮಿಸಿ ಮಾತನಾಡುತ್ತ, ಬಹುರೂಪಿ ನಾಯಕತ್ವ ಗುಣ ಹೊಂದಿದ್ದ ಗಾಂಧೀಜಿ ಜೀವಮಾನದ ಉದ್ದಕ್ಕೂ ಸತ್ಯ ಅಹಿಂಸೆ ಮೂಲಕ ಸಾಮಾಜಿಕ ನ್ಯಾಯ ವ್ಯವಸ್ಥೆಗೆ ಶ್ರಮಿಸಿದ ಮಹಾಚೇತನದ ಸಾಂಸ್ಕೃತಿಕ ಕಥನ ಇಂದಿಗೂ ಪ್ರಸ್ತುತ ಎಂದು ಅಭಿಪ್ರಾಯಪಟ್ಟರು.

- Advertisement -

ಚಿತ್ರದುರ್ಗದ ವಿದ್ವಾಂಸ ಪ್ರೊ.ಡಿ.ಆಂಜಿನಪ್ಪ ರವರು ‘ಗಾಂಧೀಜಿಯವರ ಸಮನ್ವಯ ದೃಷ್ಟಿ’ ಕುರಿತು ಉಪನ್ಯಾಸ ನೀಡಿ ವಿದ್ಯಾರ್ಥಿಗಳ ಸಂವಾದ ನಡೆಸಿದರು.  ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಜೀರಿಗೆ ಲೋಕೇಶ್ ಆಶಯ ನುಡಿಗಳನ್ನಾಡಿದರು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ.ವೂಡೇ ಪಿ. ಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಮತ್ತು ವಿಶ್ರಾಂತ ಪ್ರಾಂಶುಪಾಲರು ಹಾಗೂ ದತ್ತಿಯ ದಾನಿಗಳಾದ ಪ್ರೊ. ಚಂದ್ರಿಕಾ ಪುರಾಣಿಕ ಮತ್ತು ಸಮರ್ಪಣ ಅಧ್ಯಕ್ಷ ಎಚ್.ಎಸ್. ರಾಘವೇಂದ್ರ ಶೆಟ್ಟಿ , ಗಾಂಧಿ ಶಾಂತಿ ಪ್ರತಿಷ್ಠಾನದ ಕಾರ್ಯದರ್ಶಿ ಡಾ.ಸತ್ಯಮಂಗಲ ಮಹಾದೇವ , ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್.ಎಸ್.ಸತೀಶ್ ಉಪಸ್ಥಿತರಿದ್ದರು.

- Advertisement -
- Advertisement -

Latest News

ಎಸ್ ಎಸ್. ಎಲ್ ಸಿ ಪರೀಕ್ಷೆಯಲ್ಲಿ ಸಾಧನೆ ಗೈದ ವಿದ್ಯಾರ್ಥಿಗೆ ಸತ್ಕಾರ

ಮುಧೋಳ:  ನಗರ ಶಾಮೇಲ್ಸ್ ಪ್ರೌಢ ಶಾಲೆಯ  ಸಹನಾ ಶ್ರೀಶೈಲ್ ಚಿಕಲಕ್ಕಿ ವಿದ್ಯಾರ್ಥಿ ಕಳೆದ ಮಾರ್ಚ-ಏಪ್ರಿಲ್ ತಿಂಗಳಲ್ಲಿ ಜರುಗಿದ ಎಸ್.ಎಸ್. ಎಲ್. ಸಿ ಪರೀಕ್ಷೆಯ ಮರು ಮೌಲ್ಯ...
- Advertisement -

More Articles Like This

- Advertisement -
close
error: Content is protected !!
Join WhatsApp Group