spot_img
spot_img

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಗೆ ರಕ್ಷಣಾ ಸಚಿವಾಲಯದಿಂದ ಅನುಮೋದನೆ- ಸಂಸದ ಈರಣ್ಣಾ ಕಡಾಡಿ ಹರ್ಷ

Must Read

spot_img
- Advertisement -

ಮೂಡಲಗಿ: ಸ್ವತಂತ್ರ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸ್ಮರಣೆಗಾಗಿ ಕರ್ನಾಟಕ ಸರ್ಕಾರ ಬೆಳಗಾವಿ ಜಿಲ್ಲೆಯ ಸಂಗೊಳ್ಳಿ ಗ್ರಾಮದಲ್ಲಿ ನಿರ್ಮಿಸಿರುವ ಸೈನಿಕ ಶಾಲೆಯನ್ನು ಕೇಂದ್ರ ರಕ್ಷಣಾ ಇಲಾಖೆಯ ಅಧೀನದಲ್ಲಿ ತೆಗೆದುಕೊಳ್ಳುವ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಕೇಂದ್ರ ರಕ್ಷಣಾ ಸಚಿವಾಲಯ ಅನುಮೋದನೆ ನೀಡಿರುವುದು ಸ್ವಾಗತಾರ್ಹ ಎಂದು ಸಂಸದ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು.

ರವಿವಾರ ಮಾ-27 ರಂದು ಪತ್ರಿಕಾ ಹೇಳಿಕೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ದೇಶಾದ್ಯಂತ 100 ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸುವ ಕೇಂದ್ರ ಸರ್ಕಾರದ ಉಪಕ್ರಮದ ಆರಂಭಿಕ ಸುತ್ತಿನಲ್ಲಿ ಎನ್‍ಜಿಒಗಳು/ಖಾಸಗಿ ಶಾಲೆಗಳು/ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ 21 ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸಲು ರಕ್ಷಣಾ ಸಚಿವಾಲಯ ಅನುಮೋದನೆ ನೀಡಿದೆ. ಅದರಲ್ಲಿ ಬೆಳಗಾವಿ ಜಿಲ್ಲೆಯ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯು ಸೇರಿದೆ.

ಜಿಲ್ಲೆಯ ಸಂಗೊಳ್ಳಿ ಗ್ರಾಮದ 100 ಎಕರೆ ಜಾಗದಲ್ಲಿ ಸುಮಾರು 230 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಕಾಮಗಾರಿ ಅಂತಿಮ ಹಂತದಲ್ಲಿದೆ. ಅದನ್ನು ಕೇಂದ್ರ ರಕ್ಷಣಾ ಸಚಿವಾಲಯ ತನ್ನ ಅಧೀನಕ್ಕೆ ಪಡೆದು ಮುನ್ನಡಿಸಿಕೊಂಡು ಹೋಗಲು ಕರ್ನಾಟಕ ಸರ್ಕಾರ ಈಗಾಗಲೇ ಮನವಿ ಮಾಡಿತ್ತು.ಸದರಿ ವಿಷಯದ ಕುರಿತು ನಾನು ಕೂಡಾ ಕೇಂದ್ರ ಸಚಿವರಿಗೆ ಪತ್ರ ಮುಖೇನ ಒತ್ತಾಯ ಮಾಡಿದ್ದೆ, ಅಲ್ಲದೇ ಮಾರ್ಚ 15 ರಂದು ರಾಜ್ಯಸಭೆಯ ಕಲಾಪದ ಶೂನ್ಯವೇಳೆಯಲ್ಲಿ ಈ ವಿಷಯವಾಗಿ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗಿತ್ತು. ಕರ್ನಾಟಕದ ಜನತೆಯ ಮನವಿಯನ್ನು ಗಮನಿಸಿ ಕೇಂದ್ರ ರಕ್ಷಣಾ ಸಚಿವಾಲಯ ಸೈನಿಕ ಶಾಲೆಯನ್ನು ತನ್ನ ಅಧೀನದಲ್ಲಿ ಮುನ್ನಡೆಸಿಕೊಂಡು ಹೋಗಲಿಕ್ಕೆ ಅನುಮೋದನೆ ನೀಡಿರುವುದು ಇದು ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ಮೂರು ರಾಜ್ಯಗಳ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಲಿದೆ ಹಾಗೂ ಹೊಸ ಸೈನಿಕ ಶಾಲೆಯು ಈಗಿರುವ ಶಾಲೆಗಳಿಗಿಂತ ಅತ್ಯಂತ ವಿಭಿನ್ನವಾಗಿ ಕಾರ್ಯನಿರ್ವಹಿಸಲಿವೆ ಎಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

- Advertisement -

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಿರ್ಧಾರವನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಮತ್ತು ಈ ಕಾರ್ಯಕ್ಕೆ ಸಹಕಾರ ನೀಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಅವರಿಗೆ ರಾಜ್ಯದ ಜನತೆಯ ಪರವಾಗಿ ತುಂಬು ಹೃದಯದಿಂದ ಅಭಿನಂದಿಸುತ್ತೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

Latest News

ಕಿವುಡ ಮಕ್ಕಳ ಸಂಸ್ಥೆಗೆ ರಾಜ್ಯ ಪ್ರಶಸ್ತಿ

ಕರ್ನಾಟಕ ಸರ್ಕಾರವು ವಿಕಲಚೇತನ ಸೇವಾ ಕ್ಷೇತ್ರದಲ್ಲಿ ಅನುಪಮ ಸೇವೆಯನ್ನು ಪರಿಗಣಿಸಿ ಪ್ರಸ್ತುತ 2023ನೇ ಸಾಲಿನ ಉತ್ತಮ ಸಂಸ್ಥೆಯ ವಿಭಾಗದಡಿ ಪೇರೆಂಟ್ಸ್ ಅಸೋಸಿಯೇಷನ್ ಆಫ್ ಡೆಫ್ ಚಿಲ್ಡ್ರನ್,...
- Advertisement -

More Articles Like This

- Advertisement -
close
error: Content is protected !!
Join WhatsApp Group