ಮೂಡಲಗಿ: ಇತ್ತೀಚೆಗೆ ತಾಳಿಕೋಟೆಯ ಎಸ್.ಕೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಆತಿಥ್ಯದಲ್ಲಿ ಜರುಗಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅಂತರ ಕಾಲೇಜುಗಳ ಏಕವಲಯ ಪುರುಷ ಹಾಗೂ ಮಹಿಳಾ ಕುಸ್ತಿ ಸ್ಪರ್ಧೆಯಲ್ಲಿ ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆಯ ಮಹಾವಿದ್ಯಾಲಯದ ಬಿ.ಎ ಪ್ರಥಮ ವರ್ಷದ ವಿದ್ಯಾರ್ಥಿನಿ ಕುಮಾರಿ. ಸಂಜನಾ ಸುಣಗಾರ ಕುಸ್ತಿ ತಂಡಕ್ಕೆ ಬ್ಲ್ಯೂ ಆಗಿ ಆಯ್ಕೆಯಾಗಿ ಚಂಡೀಗಡ ರಾಜ್ಯದಲ್ಲಿ ಜರುಗಲಿರುವ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಕುಸ್ತಿ ಸ್ಪರ್ಧೆಯಲ್ಲಿ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲಿದ್ದಾರೆ.
ಸಾಧನೆಗೈದ ವಿದ್ಯಾರ್ಥಿನಿಯನ್ನು ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಚೇರಮನ್ನರಾದ ಬಸಗೌಡ ಪಾಟೀಲ, ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯ ಸುರೇಶ ಹನಗಂಡಿ, ದೈಹಿಕ ನಿರ್ದೇಶಕ ಬಿ. ಕೆ. ಸೊಂಟನವರ, ಕ್ರೀಡಾ ಕಾರ್ಯದರ್ಶಿ ಬಿ. ಬಿ. ವಾಲಿ, ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಶಂಕರ ನಿಂಗನೂರ, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

