ಸತೀಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ-ಸುಭಾಸ ಪೂಜೇರಿ

Must Read

ಮೂಡಲಗಿ: ಕಾಂಗ್ರೆಸ್ ಪಕ್ಷದಲ್ಲಿ  ಅಹಿಂದ ವರ್ಗದ ನಾಯಕ ಹಾಗೂ ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷ  ಸತೀಶ ಜಾರಕಿಹೊಳಿ ಅವರಿಗೆ ಕಾಂಗ್ರೇಸ್ ಸರಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗದ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಭಾಸ ಪೂಜೇರಿ ಆಗ್ರಹಿಸಿದರು.

ಪಟ್ಟಣದ ಪತ್ರಿಕಾ ಕಚೇರಿಯಲ್ಲಿ ಗುರುವಾರದಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಿಂದ ಹೆಚ್ಚು ಶಾಸಕರು ಆಯ್ಕೆಯಾಗಲು ರಾಜಾದ್ಯಂತ ಪ್ರವಾಸ ಮಾಡಿದ ಅಹಿಂದ ವರ್ಗದ ನಾಯಕ ಸತೀಶ ಜಾರಕಿಹೊಳಿ ಶ್ರಮ ಬಹಳಷ್ಟು ಇದೆ ಎಂದ ಅವರು ರಾಜ್ಯದಲ್ಲಿ ಉಪ್ಪಾರ ಸಮಾಜದ ಏಕೈಕ ಶಾಸಕ ಪುಟ್ಟರಂಗಶೆಟ್ಟಿ ಅವರಿಗೂ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ನೀಡಬೇಕು, ಅಪಾರ ಕಾರ್ಯಕರ್ತರೊಂದಿಗೆ  ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡು ಶಾಸಕರಾಗಿ ಆಯ್ಕೆಯಾದ ಮಧು ಬಂಗಾರೆಪ್ಪ ಅವರಿಗೂ ಸಚಿವ ಸ್ಥಾನ ನೀಡಬೇಕೆಂದು ಸುಭಾಸ ಪೂಜೇರಿ ಆಗ್ರಹಿಸಿದರು. 

ಈ ಸಂದರ್ಭದಲ್ಲಿ ಕೃಷ್ಣಪ್ಪ ಸೊನ್ನದ, ರಫೀಕ್ ತಾಂಬೋಳಿ, ಕರಿಬಸಯ್ಯ ಹಿರೇಮಠ ಉಪಸ್ಥಿತರಿದ್ದರು.

Latest News

ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ

ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ...

More Articles Like This

error: Content is protected !!
Join WhatsApp Group