ಶನಿವಾರ ಟ್ಯಾನಗ್ರಾಮ ಗಣಿತ ಚಟುವಟಿಕೆ ಕಾರ್ಯಾಗಾರ ಹಾಗೂ ಸ್ಪರ್ಧೆ

Must Read

ಮೂಡಲಗಿ– ತಾಲೂಕಿನ ಕಲ್ಲೋಳಿಯ ಬಸವೇಶ್ವರ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಶನಿವಾರ ಬಸವೇಶ್ವರ ಶಿಕ್ಷಣ ಸಂಸ್ಥೆ ಧಾರವಾಡದ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಚಿಕ್ಕೋಡಿ ಜಿಲ್ಲೆ ಇವುಗಳ ಸಹಯೋಗದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಿನ ಶಿಕ್ಷಕ ಮತ್ತು ವಿದ್ಯಾರ್ಥಿಗಳಿಗೆ ಜುಲೈ 30ರಂದು ಮುಂಜಾನೆ 10 ಗಂಟೆಗೆ ಟ್ಯಾನಗ್ರಾಮ ಗಣಿತ ಚಟುವಟಿಕೆ ಕಾರ್ಯಾಗಾರ ಹಾಗೂ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಸಂಯೋಜಕ ಚಿಕ್ಕೋಡಿ ಜಿಲ್ಲೆಯ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಗೌರವ ಅಧ್ಯಕ್ಷ ಡಾ ಬೋಜರಾಜ ಬೆಳಕೂಡ ತಿಳಿಸಿದ್ದಾರೆ.

ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತಾಧಿಕಾರಿ, ನಿವೃತ್ತ ವಿಜ್ಞಾನ ಪ್ರಾಧ್ಯಾಪಕ ಪ್ರಕಾಶ ಗರಗಟ್ಟಿವಹಿಸುವರು, ಧಾರವಾಡದ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ ವೀರಣ್ಣ ಡಿ. ಬೋಳಿಶೆಟ್ಟಿ ಉಪನ್ಯಾಸ ನೀಡುವರು, ಮುಖ್ಯ ಅಥಿತಿಗಳಾಗಿ ಸಂಸ್ಥೆಯ ಸಂಸ್ಥಾಪಕ ಈರಪ್ಪ ಬೆಳಕೂಡ, ಗೋಕಾಕದ ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಿಗಾರ ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ, ಸಂಸ್ಥೆಯ ಅಧ್ಯಕ್ಷ ರಮೇಶ ಬೆಳಕೂಡ ಆಗಮಿಸುವರು ಎಂದು ಬೆಳಕೂಡ ತಿಳಿಸಿದ್ದಾರೆ,

Latest News

ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ವ್ಯಕ್ತಿ ದಾರುಣ ಸಾವು

ಬೀದರ - ಮಕರ ಸಂಕ್ರಾಂತಿ ನಿಮಿತ್ತ ಗಾಳಿಪಟ ಹಾರಿಸುತ್ತಿರುವ ಸಂದರ್ಭದಲ್ಲಿ ರಸ್ತೆಯಲ್ಲಿ ಬೈಕ್ ಮೇಲೆ ಹೋಗುತ್ತಿದ್ದ ಯುವಕ ಸಂಜಿಕುಮಾರ ಎಂಬುವವರ ಕುತ್ತಿಗೆಗೆ ಗಾಳಿ ಪಟದ ಮಾಂಜಾ(ಚೀನಿ...

More Articles Like This

error: Content is protected !!
Join WhatsApp Group