Homeಸುದ್ದಿಗಳುಪ್ರತಿಯೊಬ್ಬರೂ ಗಿಡ ನೆಟ್ಟು ಪರಿಸರ ಸಂರಕ್ಷಣೆ ಮಾಡಿ - ಎಸ್ ಬಿ ಕೇದಾರಿ

ಪ್ರತಿಯೊಬ್ಬರೂ ಗಿಡ ನೆಟ್ಟು ಪರಿಸರ ಸಂರಕ್ಷಣೆ ಮಾಡಿ – ಎಸ್ ಬಿ ಕೇದಾರಿ

ಹಳ್ಳೂರ –  ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ದಿ ಯೋಜನೆಯ ಮೂಡಲಗಿ ತಾಲೂಕಿನ ಕಲ್ಲೋಳಿ ವಲಯದ ನಾಗನೂರಿನ ಮಹಾಲಿಂಗೇಶ್ವರ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಪರಿಸರ ಮಾಹಿತಿ ನೀಡುವ ಕಾರ್ಯಕ್ರಮ ನೆರವೇರಿತು.

ಪ್ರೌಢಶಾಲೆಯ ಪ್ರಾಚಾರ್ಯರಾದ ಎಸ್ ಬಿ ಕೇದಾರಿ ಅವರು ಗಿಡ ನೆಟ್ಟು, ಗಿಡಕ್ಕೆ ನೀರುಣಿಸುವುದರ ಮೂಲಕ ಚಾಲನೆಯನ್ನು ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಡಲಗಿ ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿಯಾದ ವಿಜಯಲಕ್ಷ್ಮಿಯವರು ಪ್ರಾಸ್ತಾವಿಕವಾಗಿ ಮಾತನಾಡಿ, ಪರಿಸರ ದಿನಾಚರಣೆ ಉದ್ದೇಶ ಹಾಗೂ ಪರಿಸರ ನಾಶದಿಂದ ಉಂಟಾಗುವ ದುಷ್ಪರಿಣಾಮಗಳು, ಗಿಡ ನಾಟಿ ಮಾಡಿ ಪೋಷಿಸುವುದರಿಂದ ಮುಂದಿನ ಪೀಳಿಗೆಗೆ ಆಗುವ ಪ್ರಯೋಜನಗಳು ಹಾಗೂ ಗ್ರಾಮ ಅಭಿವೃದ್ಧಿ ಯೋಜನೆ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮುಖ್ಯೋಪಾಧ್ಯಾಯರಾದ ಎಸ್ ಬಿ ಕೇದಾರಿಯವರು ಅವರು ಶುದ್ಧವಾದ ಗಾಳಿ, ಶುದ್ಧವಾದ ನೀರು ಮನುಷ್ಯನ ಮೂಲಭೂತ ಸೌಕರ್ಯಗಳಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದು ಅದನ್ನು ಉಳಿಸಿ ಬೆಳೆಸಬೇಕೆಂದು ಮಾಹಿತಿ ನೀಡಿದರು.

ನಂತರ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಕಲ್ಲೋಳಿ ವಲಯದ ಮೇಲ್ವಿಚಾರಕರಾದ ಶ್ರೀಮತಿ ಶ್ರುತಿ ಕೋಳಿಮಠ ಸೇವಾ ಪ್ರತಿನಿಧಿಗಳಾದ ಮಾಲಾ, ಕವಿತಾ, ಮದೀನಾ ಹಾಗೂ ಶಿಕ್ಷಕ ವೃಂದ,ಶಾಲಾ ಮಕ್ಕಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಎಸ್ ಎಸ್ ಚೌಗಲಾ ನಿರೂಪಿಸಿದರು ಕವಿತಾ ದಿನ್ನಿಮನಿ ಸ್ವಾಗತಿಸಿದರು ಶ್ರುತಿ ಕೋಳಿಮಠ ವಂದಿಸಿದರು.

RELATED ARTICLES

Most Popular

error: Content is protected !!
Join WhatsApp Group