spot_img
spot_img

ಕಮಲಕ್ಕೆ ಬೈ ಹೇಳಿ… ಕಾಂಗ್ರೆಸಕ್ಕೆ ಜೈ ಅಂದ ಮಲ್ಲಿಕಾರ್ಜುನ ಖೂಬಾ !

Must Read

spot_img

ಬೀದರ ಜಿಲ್ಲೆಯಲ್ಲಿ ಬಿಜೆಪಿಯಲ್ಲಿ ತಳಮಳ

ಬೀದರ – ಬೀದರ ಜಿಲ್ಲೆಯ ಭಾರತೀಯ ಜನತಾ ಪಕ್ಷದಲ್ಲಿ ನಡೆದ ಒಳಜಗಳ ಈಗ ಪಕ್ಷಕ್ಕೆ ಭಾರೀ ಹೊಡೆತ ನೀಡುವ ಸೂಚನೆ ನೀಡಿದ್ದು ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ ಅವರನ್ನು ಭೇಟಿ ಮಾಡಿದ್ದು ರಾಜಕೀಯವಾಗಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಬಿಜೆಪಿ ಪಕ್ಷದಲ್ಲಿ ಎಲ್ಲೋ ಎಲ್ಲವೂ ಸರಿ ಇಲ್ಲ ಎಂಬುದು ಮತ್ತೊಮ್ಮೆ ಎದ್ದು ಕಾಣುತ್ತಿದೆ.

ಕೇಂದ್ರ ಸಚಿವ ಭಗವಂತ ಖೂಬಾ ಮತ್ತು ಶಾಸಕ ಶರಣು ಸಲಗಾರ ನಡುವೆ ನಡೆದ ಗಲಾಟೆಯಲ್ಲಿ ಇತ್ತೀಚೆಗೆ ಸ್ವ ಪಕ್ಷದವರೇ ಖೂಬಾ ಅವರ ಕಾರಿನ ಮೇಲೆ ಹಲ್ಲೆ ನಡೆಸಿದ್ದರು ಈ ಘಟನೆ ಮಾಸುವ ಮುನ್ನವೇ ಮಲ್ಲಿಕಾರ್ಜುನ ಖೂಬಾ ಬಿಜೆಪಿಗೆ ಗುಡ್ ಬೈ ಹೇಳಲಿದ್ದಾರೆ ಎಂಬ ವಿಷಯ ಬೀದರ ಬಿಜೆಪಿಗೆ ಹಿನ್ನಡೆ ಉಂಟು ಮಾಡಿದೆ.

ಮಲ್ಲಿಕಾರ್ಜುನ ಖೂಬಾ ಅವರ ಈ ನಿರ್ಧಾರದ ಹಿನ್ನೆಲೆಯಲ್ಲಿ ನೋಡಬೇಕು ಅಂದರೆ, ಮಲ್ಲಿಕಾರ್ಜುನ ಖೂಬಾ ಬಸವಕಲ್ಯಾಣ ಕ್ಷೇತ್ರದ ಜನಪ್ರಿಯ ನಾಯಕರು. ಮೊಟ್ಟಮೊದಲ ಬಾರಿಗೆ ಜೆಡಿಎಸ್ ಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದರು.

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವಿಜಯ ಸಿಂಗ್

ಇಂಡಿಯಾ ಟುಡೇ ಪತ್ರಿಕೆಯ ಸ್ಟಿಂಗ್ ಆಪರೇಷನ್ ಒಂದರಲ್ಲಿ ಆರು ಕೋಟಿ ಕೊಟ್ಟರೆ ರಾಜ್ಯ ಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಲು ನಿರ್ಧಾರ ಮಾಡಿದ್ದಾಗಿ ಹೇಳಿ ಸಿಕ್ಕಿಹಾಕಿಕೊಂಡಿದ್ದರು ಖೂಬಾ ನಂತರದ ದಿನಗಳಲ್ಲಿ ಬಿ ಎಸ್ ಯಡಿಯೂರಪ್ಪ ಅವರ ಮೇಲಿನ ಪ್ರೀತಿಯಿಂದ ಭಾರತೀಯ ಜನತಾ ಪಕ್ಷಕ್ಕೆ ಬಂದರು.

ಬಸವಕಲ್ಯಾಣ ಉಪ ಚುನಾವಣೆ ಯಲ್ಲಿ ಬಿಜೆಪಿ ಪಕ್ಷದಿಂದ ಟಿಕೆಟ್ ಸಿಗದೆ ಇದ್ದ ಹಿನ್ನೆಲೆಯಲ್ಲಿ ಖೂಬಾ ಅವರು ಸ್ವತಂತ್ರ ಅಭ್ಯರ್ಥಿ ಆಗಿ ಬಿಜೆಪಿ ಅಭ್ಯರ್ಥಿ ಶರಣು ಸಲಗಾರ ವಿರುದ್ಧ ನಿಂತು ಸೋತಿದ್ದರು. ಈಗ ಬಿಜೆಪಿ ಕಮಲ ಪಕ್ಷ ಬೇಡ ಮತ್ತು ಜೆಡಿಎಸ ತೆನೆಹೊತ್ತ ಮಹಿಳೆಯೂ ಬೇಡ ಎಂದು ಕಾಂಗ್ರೆಸ್ ಪಕ್ಷ ಸೇರಲು ರೆಡಿ ಆಗಿದ್ದು ಬೆಂಗಳೂರಿನಲ್ಲಿ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಭೆಟ್ಟಿಯಾಗಿ ಬಸವಕಲ್ಯಾಣದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು.

ಆದರೆ ಬೀದರ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡರಾಗಿ ವಿಜಯಸಿಂಗ್ ಅವರು ಪಕ್ಷವನ್ನು ಮುನ್ನಡೆಸುತ್ತಿದ್ದಾರೆ. ಈಗ ಬಿಜೆಪಿಯಿಂದ ಮಲ್ಲಿಕಾರ್ಜುನ ಖೂಬಾ ಅವರು ಕಾಂಗ್ರೆಸ್ ಪಕ್ಷ ಸೇರಿಕೊಂಡರೆ ಈ ಇಬ್ಬರಲ್ಲಿ ಯಾರಿಗೆ ಮಹತ್ವ ಕೊಡಬೇಕೆಂಬ ಪ್ರಶ್ನೆ ಕಾಂಗ್ರೆಸ್ ವರಿಷ್ಠರನ್ನು ಕಾಡಿದರೆ ಅಚ್ಚರಿಯಿಲ್ಲ.

ಮಾಜಿ ಮುಖ್ಯಮಂತ್ರಿ ಧರ್ಮಸಿಂಗ ಅವರ ಪುತ್ರ ವಿಜಯ ಸಿಂಗ್ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ವಿಜಯ ಸಿಂಗ್ ಒಂದು ವರ್ಷದಿಂದ ಬಸವಕಲ್ಯಾಣದ ಸ್ಥಳೀಯ ನಾಯಕರ ಜೊತೆ ಒಳ್ಳೆಯ ಒಡನಾಟ ಹೊಂದಿದ್ದಾರೆ.

ಒಂದು ವೇಳೆ ಮಲ್ಲಿಕಾರ್ಜುನ ಖೂಬಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರೆ ವಿಜಯ ಸಿಂಗ್ ಬಸವಕಲ್ಯಾಣ ನಲ್ಲಿ ಟಿಕೆಟ್ ಸಿಗುವುದು ಅನುಮಾನಕ್ಕೆ ಎಡೆ ಮಾಡಿಕೊಡುತ್ತದೆ. ವಿಜಯ ಸಿಂಗ್ ಬೆಂಬಲಿಗರು ಮತ್ತು ಸ್ಥಳೀಯ ಕಾಂಗ್ರೆಸ್ ನಾಯಕರು ಮಲ್ಲಿಕಾರ್ಜುನ ಖೂಬಾ ಅವರನ್ನು ತೆರೆದ ಹೃದಯದಿಂದ ಸ್ವಾಗತ ಮಾಡುತ್ತಾರೋ ಅಥವಾ ಕಾಂಗ್ರೆಸ್ ನಲ್ಲಿ ಒಳ ಜಗಳಕ್ಕೆ ಇದೇ ನಾಂದಿಯಾಗುತ್ತದೆ ಎಂಬುದು ಕಾದು ನೋಡಬೇಕು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಪಂಚಮಸಾಲಿ ಸಮಾಜದ ಹೋರಾಟಕ್ಕೆ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಘೋಷಣೆ ಮೂಡಲಗಿ: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ...
- Advertisement -

More Articles Like This

- Advertisement -
close
error: Content is protected !!