ಪ್ರತಿಭಾವಂತರಿಗೆ ವಿದ್ಯಾರ್ಥಿವೇತನ ವಿತರಣೆ

Must Read

ಬೆಳಗಾವಿಯ ವೇಣುಗ್ರಾಮ ಫೌಂಡೇಶನ್ ವತಿಯಿಂದ ಜಾಂಬೋಟಿಯ ಮಾಧ್ಯಮಿಕ ವಿದ್ಯಾಲಯ ಶಾಲೆಯ
ಪ್ರತಿಭಾನ್ವಿತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಇದಲ್ಲದೆ ಅರ್ಹ ಬಡಮಕ್ಕಳ ಶಾಲಾವೆಚ್ಛವನ್ನು ಕೂಡ ನೀಡಲಾಯಿತು.

ಬೆಳಗಾವಿ ನಗರದ ವೇಣುಗ್ರಾಮ ಆಸ್ಪತ್ರೆಯ ಆಡಳಿತ ಮಂಡಳಿಯಲ್ಲಿ ಒಬ್ಬರಾದ ಕೀಲು-ಮೂಳೆ ಶಸ್ತ್ರತಜ್ಞ ಡಾ.ಅಶೋಕ ಸಂಪಗಾರ ಅವರು ಫಲಾನುಭವಿಗಳಿಗೆ ಚೆಕ್ಕುಗಳನ್ನು ವಿತರಿಸಿದರು.

ಶಾಲೆಯ ಆಡಳಿತ ಮಂಡಳಿ ಹಾಗೂ ಸಾರ್ವಜನಿಕರು ವೇಣುಗ್ರಾಮ ಆಸ್ಪತ್ರೆಯು ಗುಣಮಟ್ಟದ ಸೇವೆಯನ್ನು ನೀಡುತ್ತಿರುವುದಲ್ಲದೆ ಸಮಾಜಮುಖಿ ಕೆಲಸವನ್ನು ಮಾಡುತ್ತಿರುವುದನ್ನು ಶ್ಲಾಘಿಸಿದ್ದಾರೆ. ಫಲಾನುಭವಿ ಮಕ್ಕಳ ಪಾಲಕರು ವೇಣುಗ್ರಾಮ ಫೌಂಡೇಶನ್ ಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ಆಸ್ಪತ್ರೆಯ ಪರವಾಗಿ ಯೋಗೇಶ ದೇಶಪಾಂಡೆಯವರೂ ಕೂಡ ಹಾಜರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group