spot_img
spot_img

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Must Read

- Advertisement -

ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಸನ್ 2023-24 ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ನಡೆಯಿತು. ಅತ್ಯಂತ ಖುಷಿಯಿಂದ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಾಲೆಯ ಶಿಕ್ಷಕರು ಆತ್ಮೀಯವಾಗಿ ಸ್ವಾಗತಿಸಿದರು. ಸರಸ್ವತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಹೊಸ ಶೈಕ್ಷಣಿಕ ವರ್ಷವನ್ನು ಬರಮಾಡಿಕೊಳ್ಳಲಾಯಿತು.

ಇದೇ ಸಂದರ್ಭದಲ್ಲಿ ಮಕ್ಕಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸಲಾಯಿತು. ದಾಖಲಾತಿ ಆಂದೋಲನದ ಪ್ರಯುಕ್ತ ಘೋಷವಾಕ್ಯಗಳೊಂದಿಗೆ ಗ್ರಾಮದಲ್ಲಿ ಪ್ರಭಾತಪೇರಿ ನಡೆಸಲಾಯಿತು.

ಮುಖ್ಯಶಿಕ್ಷಕರಾದ ಎನ್.ಆರ್.ಠಕ್ಕಾಯಿ ಮಾತನಾಡಿ, 2023-24ನೇ ವರ್ಷವನ್ನು ಗುಣಾತ್ಮಕ ಶೈಕ್ಷಣಿಕ ವರ್ಷವೆಂದು ಆಚರಿಸಲಾಗುತ್ತಿದ್ದು ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು. ಆಸಕ್ತಿಯಿಂದ ಕಲಿತು ಜ್ಞಾನ ಸಂಪಾದನೆ ಮಾಡಿಕೊಂಡರೆ ಉತ್ತಮ ಫಲಿತಾಂಶ ಪಡೆಯಬಹುದು ಎಂದು ಅವರು ಅಭಿಪ್ರಾಯಪಟ್ಟರು. 

- Advertisement -

ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೈಲಹೊಂಗಲ ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಪ್ರಕಾಶ ಮೆಳವಂಕಿ ಮಾತನಾಡಿ, ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಶಿಸ್ತಿನಿಂದ ಅಧ್ಯಯನ ಮಾಡಿದರೆ ಯಶಸ್ಸು ಖಂಡಿತವಾಗಿ ಸಿಗುತ್ತದೆ ಎಂದರು. ಶಾಲೆಯಲ್ಲಿ ಸಿಗುವ ಎಲ್ಲ ಸರಕಾರಿ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಗುಣಮಟ್ಟದ ಶಿಕ್ಷಣ ಪಡೆಯಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರಾದ ಜಗದೀಶ ನರಿ, ಪ್ರವೀಣ ಗುರುನಗೌಡರ, ಸುನೀಲ ಭಜಂತ್ರಿ, ಶಿವಾನಂದ ಬಳಿಗಾರ, ಹೇಮಲತಾ ಪುರಾಣಿಕ ಹಾಗೂ ಅಡುಗೆ ಸಹಾಯಕರಾದ ಮಹಾದೇವಿ ಸೊಗಲದ, ಗಂಗವ್ವ ಅಳಗೋಡಿ ಉಪಸ್ಥಿತರಿದ್ದರು. ಪೂಜಾ ಸೊಗಲದ ಸ್ವಾಗತಿಸಿದರು. ಮಲ್ಲಮ್ಮ ಅಳಗೋಡಿ ವಂದಿಸಿದರು. ನಿರ್ಮಲಾ ಸೊಗಲದ ನಿರೂಪಿಸಿದರು.

- Advertisement -
- Advertisement -

Latest News

ಮೈಸೂರು ರೋಟರಿ ಐವರಿ ಸಿಟಿ ವತಿಯಿಂದ ಮಾರ್ಗದರ್ಶಕ ಪ್ರಶಸ್ತಿ

ಮೈಸೂರು -ಮೈಸೂರು ನಗರದ ರೋಟರಿ ಐವರಿ ಸಿಟಿ ಅಫ್ ಮೈಸೂರು ವತಿಯಿಂದ ಜಯಲಕ್ಷ್ಮಿ ಪುರಂನ ಸತ್ಯ ಸಾಯಿಬಾಬಾ ಶಿಕ್ಷಣ ಸಂಸ್ಥೆಯ ಗೌರವ ಅಧ್ಯಕ್ಷರಾದ ಪ್ರೊಫೆಸರ್ ಕೆ.ಬಿ.ಪ್ರಭು...
- Advertisement -

More Articles Like This

- Advertisement -
close
error: Content is protected !!
Join WhatsApp Group