spot_img
spot_img

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Must Read

spot_img

ಬೈಲಹೊಂಗಲ: ತಾಲೂಕಿನ ಬೂದಿಹಾಳದ ಸರಕಾರಿ ಪ್ರೌಢಶಾಲೆಯಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ಸನ್ 2022-23 ನೆಯ ಸಾಲಿನ ಶಾಲಾ ಸಂಸತ್ ಚುನಾವಣೆ ವಿಶಿಷ್ಟ ರೀತಿಯಲ್ಲಿ ನಡೆಯಿತು.

ಮತದಾನದ ಅರಿವು ಮೂಡಿಸುವ ನಿಟ್ಟಿನಲ್ಲಿ ನೈಜ ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿಯೇ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ನಾಮಪತ್ರ ಸಲ್ಲಿಕೆ, ಪರಿಶೀಲನೆ, ಚಿಹ್ನೆಗಳ ಹಂಚಿಕೆ, ಪ್ರಚಾರ, ಮತದಾನ, ಮತ ಎಣಿಕೆ ಹೀಗೆ ಎಲ್ಲ ಹಂತಗಳಲ್ಲಿ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡರು.

ವಿದ್ಯಾರ್ಥಿಗಳನ್ನೇ ಚುನಾವಣಾ ಸಿಬ್ಬಂದಿಯನ್ನಾಗಿಸಿ ತರಬೇತಿ ನೀಡಿ ಕರ್ತವ್ಯ ನಿರ್ವಹಿಸುವಂತೆ ತಯಾರಿ ಮಾಡಲಾಗಿತ್ತು. ಪಿಆರ್‌ಒ, ಎಪಿಆರ್‌ಒ, ಪಿಒ, ಮೈಕ್ರೋ ಆಬ್ಸರ್ವರ್, ಸೆಕ್ಟರ್ ಆಫೀಸರ್, ಪೋಲಿಸ್, ಮತ ಎಣಿಕೆ ಮೇಲ್ವಿಚಾರಕ, ಚುನಾವಣಾ ಏಜೆಂಟ್ ಹುದ್ದೆಗಳಲ್ಲಿ ಮಕ್ಕಳು ಆಸಕ್ತಿ ಹಾಗೂ ಹುರುಪಿನಿಂದ ಕಾರ್ಯ ನಿರ್ವಹಿಸಿದರು.

ಒಟ್ಟು 9 ಸ್ಥಾನಗಳಿಗೆ 37 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರು ಹಾಗೂ ಎಸ್.ಡಿ.ಎಂ.ಸಿ ಪದಾಧಿಕಾರಿಗಳಿಗೂ ಮತ ಚಲಾಯಿಸುವ ಅವಕಾಶ ನೀಡಲಾಗಿತ್ತು. ಶೇ.95 ರಷ್ಟು ಮತದಾನವಾಯಿತು.

ಮತ ಎಣಿಕೆ ಕ್ಷಣಕ್ಷಣಕ್ಕೂ ಕುತೂಹಲ ಕೆರಳಿಸುತ್ತಿತ್ತು. ಫಲಿತಾಂಶ ಹೊರಬಿದ್ದಂತೆ ಗೆದ್ದ ಮಕ್ಕಳು ಖುಷಿಯಿಂದ ಸಂಭ್ರಮಿಸಿದರು. ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ವಿನಾಯಕ ಬಡಿಗೇರ, ಸದಸ್ಯರಾದ ರಮೇಶ ಸೂರ್ಯವಂಶಿ, ನಿಂಗಪ್ಪ ಅಳಗೋಡಿ, ನಿರ್ಮಲಾ ಮೆಕ್ಕೇದ, ಶಿಕ್ಷಕರಾದ ಜೆ.ಆರ್.ನರಿ, ಪಿ.ಎಸ್.ಗುರುನಗೌಡರ, ಎಸ್.ವಿ.ಬಳಿಗಾರ, ಎಸ್.ಟಿ. ಚೌಗಲಾ, ಎಚ್.ವಿ.ಪುರಾಣಿಕ, ವೀರೇಂದ್ರ ಪಾಟೀಲ, ಪ್ರಾಥಮಿಕ ಶಾಲೆಯ ಪ್ರದಾನ ಗುರುಗಳಾದ ಎಂ.ಜಿ. ಚರಂತಿಮಠ, ಎಂ.ಬಿ ಹೊಂಗಲ, ವಿ.ಎಂ.ಕುರಿ, ಎಸ್.ಎಸ್.ಪಟ್ಟಣಶೆಟ್ಟಿ, ಎಸ್.ಬಿ.ರಾಮದುರ್ಗ, ತಿಪ್ಪಣ್ಣ ಮಾದರ, ಬಸವರಾಜ ಘಂಟಿ, ಅಡುಗೆ ಸಹಾಯಕರಾದ ಗಂಗವ್ವ ಅಳಗೋಡಿ, ಮಹಾದೇವಿ ಸೊಗಲದ, ವೀಣಾ ಶೀಗಿಹಳ್ಳಿ, ಪಾರವ್ವ ದಳವಾಯಿ, ಗಂಗವ್ವ ದೊಡವಾಡ ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು. ಚುನಾವಣಾಧಿಕಾರಿಯಾಗಿ ಮುಖ್ಯಶಿಕ್ಷಕರಾದ ಎನ್.ಆರ್.ಠಕ್ಕಾಯಿ, ಸಹಾಯಕ ಚುನಾವಣಾಧಿಕಾರಿಯಾಗಿ ಚುನಾವಣಾ ಸಾಕ್ಷರತಾ ಕ್ಲಬ್ ನೋಡಲ್ ಶಿಕ್ಷಕರಾದ ಎಸ್.ಬಿ.ಭಜಂತ್ರಿ ಕಾರ್ಯ ನಿರ್ವಹಿಸಿದರು.

- Advertisement -
- Advertisement -

Latest News

ಸಾಹಿತ್ಯ ಕ್ಷೇತ್ರದಲ್ಲಿ ರಶ್ಮಿಯಾಗಿ ಹೊಳೆದ ವಿ.ಕೃ.ಗೋಕಾಕ್!

ಬೇರೆಯವರ ಮೇಲೆ ಅವಲಂಬಿತವಾದ ಬದುಕು, ಸಾಧನೆ “ಮರವನ್ನು ಆಶ್ರಯಿಸಿ ಬೆಳೆದ ಬಳ್ಳಿಯಂತೆ” ಆಶ್ರಯ ತಪ್ಪಿದಾಗ ಅದು ನೆಲಕಚ್ಚುವುದು ಎಂದವರು ವಿನಾಯಕ ಕೃಷ್ಣ ಗೋಕಾಕ್ (ವಿ.ಕೃ.ಗೋಕಾಕ್). ಕನ್ನಡಕ್ಕೆ...
- Advertisement -

More Articles Like This

- Advertisement -
close
error: Content is protected !!