ಶಾಲಾ ಕೊಠಡಿ ಉದ್ಘಾಟನೆ

0
68

ಮಲ್ಲೂರ: ಬೈಲಹೊಂಗಲ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸವದತ್ತಿ ತಾಲೂಕಿನ ಮಲ್ಲೂರ ಗ್ರಾಮದಲ್ಲಿ ನಿರ್ಮಿಸಿದ ಶಾಲಾ ಕೊಠಡಿಯನ್ನು ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ ಇತ್ತೀಚೆಗೆ ಉದ್ಘಾಟಿಸಿದರು.

ವಿವೇಕ ಯೋಜನೆಯಡಿ ನಿರ್ಮಾಣವಾದ ಎರಡು ಕೊಠಡಿಗಳು ಹಾಗೂ ಸರ್ಕಾರಿ ಪ್ರೌಢಶಾಲೆ ಮಲ್ಲೂರದ ಪ್ರಯೋಗಶಾಲೆಯ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಈ ಶಾಲೆಗೆ ಇನ್ನೂ ಹೆಚ್ಚಿನ ಮೂಲಭೂತ ಸೌಕರ್ಯಗಳ ನ್ನು ಶಾಸಕರ ಅನುದಾನದಡಿ ಒದಗಿಸಲಾಗುವುದು. ಮಕ್ಕಳಿಗೆ ವಿಜ್ಞಾನ ವಿಷಯದಲ್ಲಿ ಪ್ರಯೋಗಗಳನ್ನು ರೂಢಿಸುವ ಮೂಲಕ ಪ್ರಯೋಗಾಲಯದ ಉಪಯೋಗ ಮಾಡಿಕೊಡುವಂತೆ ಶಿಕ್ಷಕರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಎರಡು ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರು ಸದಸ್ಯರು ಹಾಗೂ ಗ್ರಾಮ ಪಂಚಾಯಿತಿಯ ಸದಸ್ಯರು ಹಾಜರಿದ್ದರು ಸಮೂಹ ಸಂಪನ್ಮೂಲ ವ್ಯಕ್ತಿ ಎನ್ ಬಿ ಪೆಂಟೇದ ಸೇರಿದಂತೆ ಶಾಲೆಗೆ ಮುಖ್ಯೋಪಾಧ್ಯಾಯ ರು ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here