ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ಬೇವೂರು ಗ್ರಾಮದ ಶ್ರೀ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯ ಬೇವೂರಿನ ಬಿ.ಎ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೋಡುವ ಸಮಾರಂಭ, ಸಾಂಸ್ಕೃತಿಕ ಕ್ರೀಡೆ ಹಾಗೂ ಎನ್.ಎಸ್.ಎಸ್ ಕಾರ್ಯ ಚಟುವಟಿಕೆಗಳ ಸಮಾರೋಪ ಸಮಾರಂಭ, ಪ್ರತಿಭಾ ಪುರಸ್ಕಾರ ಸಮಾರಂಭ ದಿನಾಂಕ ೧೪-೦೮-೨೦೨೪ರ ಬುಧವಾರ ಜರುಗುವುದು ಎಂದು ಪ್ರಾಚಾರ್ಯ ಡಾ. ಜಗದೀಶ ಗು. ಭೈರಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಆದರ್ಶ ವಿದ್ಯಾವರ್ಧಕ ಸಂಘದ ಸದಸ್ಯರಾದ ಸಿದ್ದಪ್ಪ. ವಾಯ್ . ಶಿರೂರ ವಹಿಸಲಿದ್ದು, ಜನಪದ ಸಾಹಿತಿಗಳು ರಬಕವಿಯ ಉಪನ್ಯಾಸಕರು ಆದ ಶ್ರೀಕಾಂತ ಕೆಂದೂಳಿ ಸಮಾರಂಭದ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಜಗದೀಶ ಗು. ಭೈರಮಟ್ಟಿ ವಿವಿಧ ವಿಭಾಗಗಳ ಮುಖ್ಯಸ್ಥರು ಕಾರ್ಯಾಧ್ಯಕ್ಷರಾದ ಎಸ್.ಎಸ್. ಆದಾಪೂರ, ಡಾ. ಎಸ್. ಬಿ. ಹಂಚಿನಾಳ, ಜಿ.ಎಸ್. ಗೌಡರ, ಎನ್. ಬಿ ಬೆಣ್ಣೂರ ವಿದ್ಯಾರ್ಥಿ ಪ್ರತಿನಿಧಿಗಳಾದ ಹೃತಿಕ್ ಭಜಂತ್ರಿ, ಪ್ರತಿಭಾ ಹೆಳವರ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.
ಮಹಾವಿದ್ಯಾಲಯದ ವಿದ್ಯಾರ್ಥಿವೃಂದದಿಂದ ಹಾಡು, ನೃತ್ಯ, ಕೋಲಾಟ, ಏಕಪಾತ್ರಾಭಿನಯ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾಯಂಕಾಲ ೪-೦೦ ಘಂಟೆಗೆ ಜರುಗಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.