Homeಸುದ್ದಿಗಳುಹಿರಿಯ ಗಾಂಧಿವಾದಿ ಡಬ್ಲ್ಯೂ. ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ ಉಪನ್ಯಾಸ

ಹಿರಿಯ ಗಾಂಧಿವಾದಿ ಡಬ್ಲ್ಯೂ. ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ ಉಪನ್ಯಾಸ

ಬೆಂಗಳೂರು: ಗಾಂಧಿ ಶಾಂತಿ ಪ್ರತಿಷ್ಠಾನ ಮತ್ತು ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಶೇಷಾದ್ರಿಪುರಂ ಸಂಜೆ ಪದವಿ  ಕಾಲೇಜು ಸಹಯೋಗದಲ್ಲಿ ಬ್ರಹ್ಮ ಸಮಾಜದ ಮುಖಂಡ ಮತ್ತು ಹಿರಿಯ ಗಾಂಧಿವಾದಿ ಡಬ್ಲ್ಯೂ ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ ಉಪನ್ಯಾಸವನ್ನು ನಗರದ ಗಾಂಧಿಭವನದ ಶ್ರೀ ಮೈಲಾರ ಮಹಾದೇವ ಸಭಾಂಗಣದಲ್ಲಿ ಡಿಸೆಂಬರ್ 24, ಶುಕ್ರವಾರ ಸಂಜೆ 4-15ಕ್ಕೆ ಆಯೋಜಿಸಲಾಗಿದೆ.

ಬೇಂದ್ರೆಯವರ ದೃಷ್ಟಿಯಲ್ಲಿ ಸ್ವಾತಂತ್ರ್ಯ ಮತ್ತು ಗಾಂಧೀಜಿ’ ವಿಷಯದ ಕುರಿತು ದತ್ತಿ ಉಪನ್ಯಾಸವನ್ನು ಹಿರಿಯ ಹೆಸರಾಂತ ವಿಮರ್ಶಕ ಹಾಗೂ ಹಿರಿಯ ವಿದ್ವಾಂಸ ನಾಡೋಜ ಡಾ.ಜಿ.ಕೃಷ್ಣಪ್ಪ  ನೀಡಲಿದ್ದಾರೆ. ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ ‘ಬ್ರಹ್ಮಧರ್ಮ-ಗಾಯತ್ರಿ’ ಕಿರುಪುಸ್ತಕ ಲೋಕಾರ್ಪಣೆ ಮಾಡುವರು.

ಗಾಂಧೀ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಜೀರಿಗೆ ಲೋಕೇಶ್ ಅಧ್ಯಕ್ಷತೆ ವಹಿಸುವ ಸಮಾರಂಭದಲ್ಲಿ ಹಿರಿಯ ಶಿಕ್ಷಣ ತಜ್ಞ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಹಾಗೂ ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌ. ಪ್ರಧಾನ ಕಾರ್ಯದರ್ಶಿ, ನಾಡೋಜ ಡಾ. ವೂಡೇ.ಪಿ. ಕೃಷ್ಣ, ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗೌರವ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ, ಗಾಂಧಿ ಶಾಂತಿ ಪ್ರತಿಷ್ಠಾನದ ಕಾರ್ಯದರ್ಶಿ ಡಾ. ಸತ್ಯಮಂಗಲ ಮಹಾದೇವ  ಹಾಗೂ ಶೇಷಾದ್ರಿಪುರಂ ಸಂಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್.ಎಸ್.ಸತೀಶ್ ಉಪಸ್ಥಿತರಿರುವರು.

RELATED ARTICLES

Most Popular

error: Content is protected !!
Join WhatsApp Group