spot_img
spot_img

ಸಿದ್ಧರಾಮೋತ್ಸವ ನಿಮಿತ್ತ ಎಪ್ಪತೈದು ಕಿ.ಮೀ ಪಾದಯಾತ್ರೆ – ಈಶ್ವರ ಖಂಡ್ರೆ

Must Read

ಬೀದರ – ಮಾಜಿ ಮುಖ್ಯಮಂತ್ರಿ ಸಿದ್ರಾಮಯ್ಯ ಅವರ ೭೫ ನೇ ಹುಟ್ಟು ಹಬ್ಬದ ನಿಮಿತ್ತ ಕಾಂಗ್ರೆಸ್ ಅಮೃತ ಮಹೋತ್ಸವ ಕಾರ್ಯವನ್ನು ಹಮ್ಮಿಕೊಂಡಿದೆ ಈ ಸಂದರ್ಭದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕರ್ತರು ಎಪ್ಪತೈದು ಕಿಲೋಮೀಟರ್ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ತೆ ಹೇಳಿದರು.

ಅಗಸ್ಟ್ 9 ರಂದು ದಿನಾಂಕ ನಿಗದಿ ಮಾಡಿದ ಈಶ್ವರ ಖಂಡ್ರೆ ಪಾದಯಾತ್ರೆಯ ಬಗ್ಗೆ ನಮ್ಮ ಬೀದರ್ ಜಿಲ್ಲೆಯ ನಾಯಕರ ಜೊತೆ ಚರ್ಚೆ ಮಾಡುತ್ತೇನೆ ಎಂಬುದಾಗಿ ಹೇಳಿದರು.

ಸಿದ್ರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಪತ್ರಕರ್ತರಿಗೆ ಮಾಹಿತಿ ನೀಡಿದರು. ಹುಮನಾಬಾದ ಶಾಸಕ ರಾಜಶೇಖರ ಪಾಟೀಲ ಮತ್ತು ಬೀದರ್ ನಗರದ ಶಾಸಕ ರಹೀಂ ಖಾನ್ ಸಾಥ್ ನೀಡಿದರು.

ಈಶ್ವರ ಖಂಡ್ರೆ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ರೀತಿಯಲ್ಲಿ ಬಣ್ಣಿಸಲಾಗುತ್ತಿದ್ದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಎಚ್ಚರಿಕೆ ಗಂಟೆ ಎಂದೂ ಕೂಡ ವಿಶ್ಲೇಷಣೆ ಮಾಡಲಾಗುತ್ತಿದೆ ಆದರೆ ಯಾವ ಕಾಂಗ್ರೆಸ್ ನಾಯಕರೂ ಈ ಬಗ್ಗೆ ಮಾತನಾಡದೇ ಇರುವುದು ಹಲವು ಗುಮಾನಿಗಳನ್ನು ಹುಟ್ಟಿಸಿದೆಯೆನ್ನಬಹುದು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಶ್ರೀ ಕೃಷ್ಣ ಜನ್ಮಾಷ್ಟಮಿ

ಸರ್ವಾಸಾಂ ಜಯಂತೀನಾಂ ಶ್ರೇಷ್ಠಾ ಕೃಷ್ಣಾಷ್ಟಮೀ ಮತಾ ಯಸ್ಮಾತ್ ಸನ್ನಿಹಿತಾತ್ಯಂತಂ ತತ್ರೈವೋಪವಸೇನ್ನರಃ ಸರ್ವಾಸ್ವಪಿ ಜಯಂತೀಷು ಪೂಜಾ ಕಾರ್ಯಾ ವಿಸೇಷತಃ ಸಾನಿಧ್ಯ ಏವ ಕರ್ತವ್ಯ ಉಪವಾಸೋ ನ ದೂರಗಃ ಎಲ್ಲ ಜಯಂತಿಗಳಲ್ಲಿಯೂ ಶ್ರೀ ಕೃಷ್ಣ...
- Advertisement -

More Articles Like This

- Advertisement -
close
error: Content is protected !!