ಮೂಡಲಗಿ: ಮಹಿಳೆಯರು ಸ್ವಾವಲಂಬಿ ಜೀವನವನ್ನು ನಡೆಸಲು ಹೊಲಿಗೆ ತರಬೇತಿ ಅವಶ್ಯವಾಗಿದೆ. ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಘ ಕಾರ್ಯ ಶ್ಲಾಘನೀಯವಾಗಿದೆ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣಾಭಿವೃದ್ಧಿ ಸಂಘದ ಅಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು.
ಅವರು ಪಟ್ಟಣದ ನಾಗಲಿಂಗ ನಗರದ ನಿವಾಸ ಕಂಪ್ಯೂಟರ್ ತರಬೇತಿ ಕೇಂದ್ರದ ಕಾರ್ಯಾಲಯದಲ್ಲಿ ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಘ ಮೂಡಲಗಿ ಸಹಯೋಗದಲ್ಲಿ ಹೊಲಿಗೆ ತರಬೇತಿ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಭಾಗದ ಮಹಿಳೆಯರು ಮತ್ತು ಯುವಕರಿಗೆ ಉಚಿತವಾಗಿ ಕೇಂದ್ರ ಸರ್ಕಾರ ತರಬೇತಿ ನೀಡುತ್ತಿದೆ ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷೆ ಅಕ್ಕಮಹಾದೇವಿ ಗೊಡ್ಯಾಗೋಳ, ಗಜಾನನ ಅಟಮಟ್ಟಿ, ಪೂರ್ಣಿಮಾ ಗೊಡ್ಯಾಗೋಳ, ಮಾಯವ್ವ ಗೊಡ್ಯಾಗೋಳ,ಸುಭಾಸ ಢವಳೇಶ್ವರ,ಸಂಘದ ಸರ್ವಸದಸ್ಯರು ಹಾಗೂ ಹೊಲಿಗೆ ತರಬೇತಿ ಶಿಬಿರಾರ್ಥಿಗಳು ಇದ್ದರು.