spot_img
spot_img

ಶರಣರ ವಿಚಾರಗಳನ್ನು ಜಾರಿಗೆ ತರಲು ಪ್ರಯತ್ನಿಸಬೇಕು – ಈರಣ್ಣ ಕಡಾಡಿ

Must Read

ಮೂಡಲಗಿ: ಸಮಾಜ ಸುಧಾರಣೆಗೆ ಮಠಾಧೀಶರು ಹಲವಾರು ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡಿದರು ಅದು ಅವರ ವೈಯಕ್ತಿಕವಾಗಿರುವುದಿಲ್ಲ ಅದು ಸಮಾಜದ ಚಟುವಟಿಕೆಯಾಗಿರುತ್ತದೆ. ಹೀಗಾಗಿ ಅವರು ಮಾಡುವಂತಹ ಕಾರ್ಯಕ್ಕೆ ಸಹಕಾರ ಕೊಡುವುದರ ಮುಖಾಂತರ ಜನಸಾಮ್ಯಾನರಾದ ನಾವು ಕೂಡ ಈ ನಾಡಿನ ಅನೇಕ ಶರಣರ ವಿಚಾರಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಸೋಮವಾರ ಜೂನ 13 ರಂದು ಸುಣಧೋಳಿ ಗ್ರಾಮದ ಶ್ರೀ ಜಡಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ನಂತರ ಶ್ರೀ ಮ.ನಿ.ಪ್ರ. ಶಿವಾನಂದ ಮಹಾಸ್ವಾಮಿಗಳು ಲೋಕಕಲ್ಯಾಣಕ್ಕಾಗಿ 11 ದಿನಗಳ ಮೌನ ಅನುಷ್ಠಾನ ಮಹಾಮಂಗಲ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು, ನಮ್ಮೆಲ್ಲರ ಕಲ್ಯಾಣಕ್ಕಾಗಿ ಕಳೆದ 11 ದಿನಗಳಿಂದ ಒಂದು ಮೌನ ವ್ರತವನ್ನು ಆಚರಿಸುವ ಮುಖಾಂತರ ಈ ನಾಡಿಗೆ ಒಳ್ಳೆಯ ಮಳೆ, ಬೆಳೆ ಬರಬೇಕೆಂದು ಮತ್ತು ನಾವೆಲ್ಲರೂ ಶಾಂತಿ ಸುವ್ಯವಸ್ಥೆಯಿಂದ ಇರಬೇಕಾಗಿರುವದರಿಂದ ಅದಕ್ಕೊಂದು ಒಳ್ಳೆಯ ವಾತಾವರಣ ನಿರ್ಮಾಣವಾಗುವ ದೃಷ್ಟಿಯಿಂದ ಪೂಜ್ಯರು ಭಗವಂತನಲ್ಲಿ ಪ್ರಾರ್ಥನೆ ಮಾಡಿ ಇವತ್ತು ಅದರ ಮಹಾಮಂಗಲದ ಕಾರ್ಯಕ್ರಮ ನಡೆಯುತ್ತಿದೆ ಎಂದರು.

ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು ಸುಣಧೋಳಿ ಮಠದ ಪೀಠಾಧಿಪತಿಗಳಾದ ನಂತರ ಬಹಳಷ್ಟು ಒಳ್ಳೆಯ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಅದಕ್ಕೆ ಭಗವಂತ ಇನ್ನೂ ಹೆಚ್ಚಿನ ವೇಗವನ್ನು ಕೊಡಲಿ ಅವರಿಗೆ ಇನ್ನೂ ಹೆಚ್ಚಿನ ಶಕ್ತಿಯನ್ನು ಕರುಣಿಸಿ ನಮ್ಮ ನಾಡಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ಗೋಕಾಕ ಶೂನ್ಯ ಸಂಪಾದನ ಮಠದ ಪೂಜ್ಯ ಶ್ರೀ ಮುರಘರಾಜೇಂದ್ರ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಪೂಜ್ಯ ಶ್ರೀ ಶಾಂತವೀರ ಮಹಾಸ್ವಾಮಿಗಳು, ಪೂಜ್ಯ ಶ್ರೀ ಪ್ರಭುಲಿಂಗ ಮಹಾಸ್ವಾಮಿಗಳು, ಪೂಜ್ಯ ಶ್ರೀ ನಿಜಗುಣದೇವರು, ಪೂಜ್ಯ ಶ್ರೀ ಬ್ರಹ್ಮಾನಂದ ಸ್ವಾಮಿಗಳು, ಪೂಜ್ಯ ಶ್ರೀ ಬಸವರಾಜ ಗುರುಗಳು ಸೇರಿದಂತೆ ಅನೇಕ ಭಕ್ತಾದಿಗಳು, ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

- Advertisement -
- Advertisement -

Latest News

ವಿರಾಟಪುರ ವಿರಾಗಿ ಚಿತ್ರದ ವಾಲ್ ಪೋಸ್ಟರ್ ಬಿಡುಗಡೆ

ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು. ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ...
- Advertisement -

More Articles Like This

- Advertisement -
close
error: Content is protected !!