ಏ.8 ರಂದು ಶರಣು ಶರಣಾರ್ಥಿ ಕಾರ್ಯಕ್ರಮ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಮೂಡಲಗಿ: ಅಖಿಲ ಭಾರತ ದೀಕ್ಷ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಏ. 8ರಂದು ಮುಂಜಾನೆ 9ಗಂಟೆಗೆ ಸಮೀಪದ ಗುರ್ಲಾಪೂರದ ಬಸವೇಶ್ವರ ಮಂಪಟದಲ್ಲಿ ಶರಣು ಶರಣಾರ್ಥಿ ಕಾರ್ಯಕ್ರಮ ನಡೆಯಲಿದೆ ಎಂದು ಪಂಚಮಸಾಲಿ ಸಮಾಜದ ತಾಲೂಕಾ ಅಧ್ಯಕ್ಷ ಬಸವರಾಜ ಪಾಟೀಲ ತಿಳಿಸಿದರು.

ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೀಕ್ಷ ಪಂಚಮಸಾಲಿ ಸಮಾಜದವರಿಗೆ 2ಎ ಮೀಸಲಾತಿ ಕಲ್ಪಿಸಬೇಕು ಮತ್ತು ಉಳಿದ 84 ಉಪಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಬೇಕೆಂದು ಹೋರಾಟದ ಭಾಗವಾಗಿ ಮತ್ತು ಇದುವರೆಗೆ ಹೋರಾಟಕ್ಕೆ ಸಹಕಾರ ನೀಡಿದ ಹಿನ್ನೆಲೆಯಲ್ಲಿ ರಾಜ್ಯದ ಜನರಿಗೆ ಅಭಿನಂದನೆ ಸಲ್ಲಿಸಲು ಬಸವಜಯ ಮೃತ್ಯುಂಜಯ ಸ್ವಾಮೀಜಗಳು ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದರು.

ಯುವ ಮುಖಂಡ ಮಲ್ಲು ಬೋಳನವರ ಮಾತನಾಡಿ, ಏ.8ರಂದು ಬೆಳಿಗ್ಗೆ 9 ಗಂಟೆಗೆ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿಗಳು ಹಾಗೂ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಮತ್ತು ಸಮಾಜದ ಅನೇಕ ಮುಖಂಡರು ಆಗಮಿಸುವವರು. ಆದರಿಂದ ತಾಲೂಕಿನ ಪಂಚಮಸಾಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್-19 ಪಾಲನೆಯೊಂದಿಗೆ ಭಾಗವಹಿಬೇಕೆಂದರು.

- Advertisement -

ಯುವ ಮುಖಂಡ ಈಶ್ವರ ಢವಳೇಶ್ವರ ಮಾತನಾಡಿ, ಸಮಾಜದ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ಮೀಸಲಾತಿ ನೀಡಲು ನವೆಂಬರ್ ತಿಂಗಳವರೆಗೆ ಸಮಯ ತೆಗೆದುಕೊಂಡಿದೆ. ಹೀಗಾಗಿ ಸದ್ಯಕ್ಕೆ ಹೋರಾಟ ಕೈಬಿಡಲಾಗಿದೆ. ನವೆಂಬರ್ ನಂತರ ಸರ್ಕಾರದ ತೀರ್ಮಾನ ನೋಡಿಕೊಂಡು ಸಮಾಜ ಮುಂದೆ ನಿರ್ಧಾರವಾಗಲಿದೆ ಎಂದು ಹೇಳಿದರು.

- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!