ಮೂಡಲಗಿ : ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣಗೌಡ ಹಾಗೂ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಅವರ ಆದೇಶದ ಮೇರೆಗೆ ಕಲ್ಲೋಳಿಯ ಶಿವಾನಂದ ಗೋಟಿ ಅವರನ್ನು ಮೂಡಲಗಿ ಕರವೇ ತಾಲೂಕಾ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಕರ್ನಾಟಕ ರಕ್ಷಣಾ ವೇದಿಕೆಯ ತತ್ವ ಸಿದ್ಧಾಂತ ನೀತಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ನೆಲ ಜಲ ನಾಡು ನುಡಿಗಾಗಿ ಪ್ರಾಮಾಣಿಕ ಸೇವೆ ಸಲ್ಲಿಸುವಂತೆ ತಾಲೂಕಾ ಘಟಕದ ಅಧ್ಯಕ್ಷ ಸಂಜೀವಕುಮಾರ ಯಕ್ಷಂಬಿ ಅವರು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

