ನಾಡೋಜ ಕವಿ ಚನ್ನವೀರ ಕಣವಿ ಅವರ ಶೃದ್ಧಾಂಜಲಿ ಕಾರ್ಯಕ್ರಮ

Must Read

ಬೆಳಗಾವಿಃ ಹಿರಿಯ ಕವಿ, ನಾಡೋಜ ಡಾ.ಚನ್ನವೀರ ಕಣವಿ ಅವರಿಗೆ ಶೃದ್ಧಾಂಜಲಿ ಕಾರ್ಯಕ್ರಮವನ್ನು ದಿನಾಂಕಃ ೧೬-೦೨-೨೦೨೨ ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಡಾ.ಮಹೇಶ.ಗಾಜಪ್ಪನವರ ಅವರು ಅಗಲಿದ ಕವಿಗಳ ಕುರಿತು ಮಾತನಾಡುತ್ತಾ, ನಿಸರ್ಗ ಪ್ರೇಮ ಮತ್ತು ಮಾನವೀಯತೆಯ ಮೌಲ್ಯಗಳು ಅವರ ಕಾವ್ಯದಲ್ಲಿ ಹಾಸು ಹೊಕ್ಕಾಗಿವೆ, ಹಲವಾರು ಪ್ರಶಸ್ತಿಯನ್ನು ಪಡೆದಿದ್ದ ಶ್ರೀಯುತರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ”.ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಾ.ಶೋಭಾ ನಾಯಕ, ಫಕೀರಪ್ಪ ಸೊಗಲದ, ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group