ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಕಾಂಗ್ರೆಸ್ ಪಕ್ಷದಿಂದ ಶೃದ್ಧಾಂಜಲ್ಲಿ ಸಭೆ

Must Read

ಮೂಡಲಗಿ: ಸರಳ ಸಜ್ಜನಿಕೆಯ ಕಾಂಗ್ರೆಸ್ ಪಕ್ಷದ ರಾಜಕಾರಣಿ ಆಸ್ಕರ್ ಫರ್ನಾಂಡಿಸ್ ಅವರ ಅಕಾಲಿಕ ನಿಧನದಿಂದ ಪಕ್ಷಕ್ಕೆ ಮತ್ತು ನಾಡಿಗೆ ಬಹಳ ನಷ್ಟವಾಗಿದೆ ಎಂದು ಅರಭಾವಿ ಕ್ಷೇತ್ರದ ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ ಹೇಳಿದರು.

ಪಟ್ಟಣದ ಸಂಪದಯ್ಯಾ ಮಠದ ಆವರಣದಲ್ಲಿ ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಶೃದ್ಧಾಂಜಲಿ ಸಭೆಯಲ್ಲಿ ಮಾತನಾಡಿ , ಫರ್ನಾಂಡಿಸ್ ಅವರು ಸಾಮಾನ್ಯ ಕುಟುಂಬದಿಂದ 1980 ರಲ್ಲಿ ಸಂಸದರಾಗಿ ಆಯ್ಕೆಯಾಗಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಓರ್ವ ರಾಜಕಾರಣಿ ಮಾತ್ರ ಆಗಿರದೆ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಯಾವುದೇ ಜಾತಿ, ಧರ್ಮ ಮತ್ತು ಭಾಷೆಯನ್ನು ಲೆಕ್ಕಿಸದೆ ಜನರ ಸುಖ ದುಃಖಗಳಲ್ಲಿ ಭಾಗಿಯಾಗುತ್ತಿದ್ದ ಶ್ರೇಷ್ಠ ನಾಯಕ.

ಅವರು ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿ ಯುಪಿಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಸಾರಿಗೆ ಮತ್ತು ಕಾರ್ಮಿಕ ಸಚಿವರಾಗಿ ಸೇವೆ ಸಲ್ಲಿಸುವ ಮೂಲಕ ಕಾರ್ಮಿಕರ ಹಲವಾರು ಬೇಡಿಕೆಗಳನ್ನು ಈಡೇರಿಸಿ ರಾಜ್ಯದಲ್ಲಿನ ಕೊಂಕಣ ರೇಲ್ವೆ ಸೇವೆಗೆ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.

ಸಭೆಯಲ್ಲಿ ಪಟ್ಟಣದ ಚರ್ಚ ಫಾದರ್ ರೇ.ಡೆನಿಯಲ್ ಬಾಬು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರಾದ ಎಸ್.ಆರ್.ಸೋನವಾಲಕರ, ವಿ.ಪಿ.ನಾಯಿಕ, ಗುರಪ್ಪಾ ಹಿಟ್ಟಣಗಿ ಮಾತನಾಡಿ ಆಸ್ಕರ್ ಫರ್ನಾಂಡಿಸ್ ಅವರ ಕಾರ್ಯ ವೈಖರಿ ಬಗ್ಗೆ ಮಾತನಾಡಿದರು.

ಸಭೆಯಲ್ಲಿ ಆಸ್ಕರ್ ಫರ್ನಾಂಡಿಸ್ ಅವರ ಭಾವ ಚಿತ್ರಕ್ಕೆ ಪುಷ್ಪ ಅರ್ಪಿಸಿ ಮೌನಾಚರಣೆ ಮಾಡುವ ಮೂಲಕ ಶೃದ್ಧಾಂಜಲಿ ಅರ್ಪಿಸಿದರು.

ಸಭೆಯಲ್ಲಿ ವಿರುಪಾಕ್ಷ ಮುಗಳಖೋಡ, ಸುರೇಶ ಮಗದುಮ್, ಹಸನಾಸಾಬ ಮುಗಟಖಾನ, ಅಮೀರಹಜ್ಮಾ ಥರಥರಿ, ಸಲಿಂ ಇನಾಮದಾರ, ರವಿ ಮೂಡಲಗಿ, ಇರ್ಶಾದ ಪೈಲವಾನ್, ಇಮಾಮ ಹುನೂರ, ಮಲ್ಲಿಕ ಕಳ್ಳಿಮನಿ ಮತ್ತು ಪಟ್ಟಣ ಹಾಗೂ ವಿವಿಧ ಗ್ರಾಮಗಳ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group