spot_img
spot_img

ಬೆಳಗಾವಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ ಆಯ್ಕೆ

Must Read

spot_img

ಜಿಲ್ಲಾ ಕಸಾಪ ದಿಂದ ಗೌರವ ಸನ್ಮಾನ

ಬೆಳಗಾವಿ: ಚಿಕ್ಕೋಡಿಯಲ್ಲಿ ಜರುಗಲಿರುವ ನಿಯೋಜಿತ ೧೫ ನೇ  ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಚಿಕ್ಕೋಡಿ ತಾಲೂಕಿನ ಚಿಂಚಣಿಯ ಅಲ್ಲಮಪ್ರಭು ಸಿದ್ಧ ಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಅಲ್ಲಮಪ್ರಭು ಮಹಾಸ್ವಾಮಿಗಳನ್ನು ಒಕ್ಕೊರಲಿನಿಂದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯಕಾರಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯಕಾರಿ ಸಮಿತಿ ಸದಸ್ಯರನ್ನೊಳಗೊಂಡಂತೆ ಎಲ್ಲಾ ತಾಲೂಕಾ ಅಧ್ಯಕ್ಷರಗಳ ನಿಯೋಗ ಚಿಂಚಣಿಯ ಅಲ್ಲಮಪ್ರಭು ಸಿದ್ದ ಸಂಸ್ಥಾನ ಮಠಕ್ಕೆ ಭೇಟಿ ನೀಡಿ ಚಿಕ್ಕೋಡಿಯಲ್ಲಿ ಜರುಗಲಿರುವ ೧೫ ನೇ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಆಯ್ಕೆಗೊಂಡ  ಪರಮಪೂಜ್ಯ ಶ್ರೀ ಅಲ್ಲಮಪ್ರಭು ಮಹಾಸ್ವಾಮಿಗಳನ್ನು ಸತ್ಕರಿಸಲಾಯಿತು.

ಈ ಸಂಧರ್ಭದಲ್ಲಿ ಮಾತನಾಡಿದ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಂಗಲಾ ಮೆಟಗುಡ್ಡ, ಚಿಕ್ಕೋಡಿ ತಾಲೂಕಾ ಕಸಾಪ ಅಧ್ಯಕ್ಷ ಡಾ. ಸುರೇಶ ಉಕ್ಕಲಿ, ನಿಪ್ಪಾಣಿ ತಾಲೂಕಾ ಕಸಾಪ ಅಧ್ಯಕ್ಷ ಈರಣ್ಣ ಶಿರಗಾವಿ, ರಾಮದುರ್ಗ ತಾಲೂಕಾ ಕಸಾಪ ಅಧ್ಯಕ್ಷ ಪಾಂಡುರಂಗ ಜಟಗನ್ನವರ, ಅಥಣಿ ತಾಲೂಕಾ ಅಧ್ಯಕ್ಷ ಎಂ. ಜಿ. ಕನಶೆಟ್ಟಿ ಮಾತನಾಡಿ ಗಡಿಭಾಗದಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕ ತತ್ವದಡಿ ಭಾಷೆ ಸಾಹಿತ್ಯದ ಅಪ್ರತಿಮ ಸೇವೆ ಸಲ್ಲಿಸುತ್ತಾ ಧರ್ಮದ ಕಾರ್ಯದೊಂದಿಗೆ ಕನ್ನಡ ಬಾಷೆಯ ಸೇವೆಯನ್ನು ವಿಶಿಷ್ಟವಾಗಿ ಮಾಡುತ್ತಿರುವ ಶ್ರೀಗಳು ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಕನ್ನಡ ಸಾಹಿತ್ಯ ಪರಿಷತ್ ಮತ್ತು ಇಡೀ ಕನ್ನಡ ನಾಡಿಗೆ ಸಂದ ಗೌರವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ನ ವಿವಿಧ ತಾಲೂಕಿನ ಅಧ್ಯಕ್ಷರುಗಳಾದ ಪ್ರಕಾಶ ಅವಲಕ್ಕಿ, ಡಾ. ಸುರೇಶ ಉಕ್ಕಲಿ, ಶ್ರೀಮತಿ ಭಾರತಿ ಮಗದುಮ್, ಈರಣ್ಣ ಶಿರಗಾವಿ, ಎಂ. ಈ. ಕನಶೆಟ್ಟಿ, ಡಾ. ಸಂಜಯ ಶಿಂಧಿಹಟ್ಟಿ, ಪಾಂಡುರಂಗ ಜಟಗನ್ನವರ,  ಜಿಲ್ಲಾ ಗೌರವ ಕಾರ್ಯದರ್ಶಿ ಎಂ. ವೈ. ಮೆಣಶಿನಕಾಯಿ, ಕಿರಣ ಸಾವಂತನವರ, ಶಿವಾನಂದ ತಲ್ಲೂರ, ಆಕಾಶ್ ಥಬಾಜ, ವೀರಭದ್ರ ಅಂಗಡಿ, ಎ. ಹೆಚ್. ವಂಟಗುಡಿ, ಬಿ. ವೈ ಶಿವಾಪೂರ ಒಳಗೊಂಡಂತೆ ಇನ್ನಿತರ ಕಾರ್ಯಕಾರಿ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.


ವರದಿ: ಆಕಾಶ ಅರವಿಂದ ಥಬಾಜ
ಜಿಲ್ಲಾ ಸಹ ಮಾಧ್ಯಮ ಪ್ರತಿನಿಧಿ
ಕನ್ನಡ ಸಾಹಿತ್ಯ ಪರಿಷತ್

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಪಂಚಮಸಾಲಿ ಸಮಾಜದ ಹೋರಾಟಕ್ಕೆ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಘೋಷಣೆ ಮೂಡಲಗಿ: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ...
- Advertisement -

More Articles Like This

- Advertisement -
close
error: Content is protected !!