ಮುಧೋಳ – ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಸಭೆಯು ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಪರಮಾನಂದ ದೇವಸ್ಥಾನದ ಸಭಾಭವನದಲ್ಲಿ ಸೋಮವಾರ ದಿ .18 ರಂದು ಮಧ್ಯಾಹ್ನ 12 ಗಂಟೆಗೆ ಜರುಗಲಿದೆ ಎಂದು ಲೋಕನಾಯಕಿ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷೆ .ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರತಿನಿಧಿ ಎಲ್.ಶಾಮಲಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಪತ್ರಿಕೆಯೊಂದಿಗೆ ಅವರು ಮಾತನಾಡುತ್ತಾ ಮಧ್ಯಾಹ್ನ 12 ಗಂಟೆಗೆ ಸ್ವಾಮಿ ಮಂಜುನಾಥ ಮಹಾಸ್ವಾಮಿಯ ಪೂಜಾ ಕಾರ್ಯಕ್ರಮ ಜರಗುವುದು. ನಂತರ ಒಕ್ಕೂಟದ ಸಭೆಯನ್ನು ತಾಲೂಕಾ ಯೋಜನಾಧಿಕಾರಿಗಳಾದ ರಾಜು ಆಚಾರ್ಯರು ಉದ್ಘಾಟಿಸಿ ಒಕ್ಕೂಟದ ಸವ೯ಸದಸ್ಯರನ್ನುದ್ದೇಶಿಸಿ ಮಾತನಾಡುವರು.ಈ ಸಂದರ್ಭದಲ್ಲಿ ಕೃಷಿ ಅಧಿಕಾರಿಗಳಾದ ಪ್ರವೀಣ ಹಾಗೂ ವಲಯ ಮೇಲ್ವಿಚಾರಕರಾದ ಚಂದ್ರಕಲಾ ಅವರು ಉಪಸ್ಥಿತರಿರುವರು ಎಂದು ಹೇಳಿ, ಸಂಘದ ಸವ೯ಸದಸ್ಯರು ಭಾಗವಹಿಸಲು ಶ್ಯಾಮಲಾ ಅವರು ಕೋರಿದ್ದಾರೆ