ಮೂಡಲಗಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಹಾಯಧನ ನೀಡುವುದರ ಜೊತೆಗೆ ಸಮಾಜಮುಖಿ ಸೇವೆ ಸಲ್ಲಿಸಿ ಕೃಷಿ,ಶಿಕ್ಷಣ, ಸಮಾಜ ಅಭಿವೃದ್ದಿ, ಮಾಸಾಶನ ಹೀಗೆ ಹಲವಾರು ಕಾರ್ಯಗಳನ್ನು ಮಾಡುವುದರ ಜೊತೆಗೆ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೋಶ್ರೀಯವರ ಮಾರ್ಗದರ್ಶನದಲ್ಲಿ ಗ್ರಾಮಾಭಿವೃದ್ದಿ ಯೋಜನೆಯು ರಾಜ್ಯದ ಪ್ರತಿಯೊಂದು ಹಳ್ಳಿಗಳಲ್ಲಿ ಹೆಸರುವಾಸಿಯಾಗಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಹೇಳಿದರು.
ಅವರು ಮಂಗಳವಾರದಂದು ಸಮೀಪದ ಶಿಂದಿಕುರಬೇಟ ಗ್ರಾಮದ ಶ್ರೀ ಗ್ರಾಮದೇವಿ(ದ್ಯಾಮವ್ವದೇವಿ) ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ದೇವಸ್ಥಾನ ಜೀರ್ಣೋದ್ಧಾರ ಯೋಜನೆಯಡಿಯಲ್ಲಿ ಒಂದು ಲಕ್ಷ ರೂಪಾಯಿ ಸಹಾಯಧನದ ಚೆಕ್ ವಿತರಿಸಿ ಮಾತನಾಡಿದರು.
ಎಲ್ಲ ಕ್ಷೇತ್ರದಲ್ಲೂ ವಿವಿಧ ಕಾರ್ಯಗಳನ್ನು ಮಾಡುವ ಮೂಲಕ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಕೃಪಾಶೀರ್ವಾದೊಂದಿಗೆ ಜನತೆ ನೆಮ್ಮದಿ ಜೀವನ ನಡೆಸಲು ಸಹಕಾರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ತಾಲೂಕಾ ಯೋಜನಾಧಿಕಾರಿ ಮಮತಾ ನಾಯ್ಕ, ಮೇಲ್ವಿಚಾರಕಿ ಶ್ರೀದೇವಿ ಪಾಟೀಲ, ಶ್ರೀ ಗ್ರಾಮದೇವಿ ಕಮೀಟಿಯ ಪರುಶರಾಮ ಕೋಳಿ, ನಾಗಲಿಂಗ ಪೋತದಾರ, ಸುರೇಶ ದೇವಮಾನೆ, ಮಂಜುನಾಥ ಮಾನೆಪ್ಪಗೋಳ,ಮಲ್ಲಪ್ಪ ಹೌಂದಯ್ಯಗೋಳ,ಶಂಕರ ಬಡಿಗೇರ, ಶ್ರೀಕಾಂತ ಬಡಿಗೇರ, ಒಕ್ಕೂಟದ ಪದಾಧಿಕಾರಿಗಳು, ಸೇವಾ ಪ್ರತಿನಿಧಿಗಳು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.