- Advertisement -
ಮೈಸೂರು -ಮೈಸೂರಿನ ಕಾಳಿದಾಸ ರಸ್ತೆಯಲ್ಲಿರುವ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಶ್ರೀ ಲಕ್ಷ್ಮೀನರಸಿಂಹ ಜಯಂತ್ಯುತ್ಸವ ಹಾಗೂ ವಿಶೇಷ ಸ್ವಾತಿ ನಕ್ಷತ್ರದ ಪೂಜೆಯನ್ನು ದೇವಸ್ಥಾನದ ಮುಖ್ಯಸ್ಥರಾದ ಕೆ.ಆರ್.ಯೋಗಾನರಸಿಂಹನ್ (ಮುರುಳಿ ಅಯ್ಯಂಗಾರ್) ನೇತೃತ್ವದಲ್ಲಿ ಆಯೋಜಿಸಲಾಗಿತ್ತು.
ನೂರಾರು ಭಕ್ತರು ಬೆಳಿಗ್ಗೆಯಿಂದಲೇ ದೇವರ ದರ್ಶನ ಪಡೆದು ಪುನೀತರಾದರು. ಸಂಜೆ ಮಳೆಯ ಸಿಂಚನದ ನಡುವೆಯೂ ತೀರುವೀದಿ ಉತ್ಸವ ಬಹಳ ವಿಜೃಂಭಣೆಯಿಂದ ನೆರವೇರಿತು. ಬಂದ ಭಕ್ತಾದಿಗಳೆಲ್ಲರಿಗೂ ತೀರ್ಥ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿತ್ತು.