ಶ್ರೀಮಧ್ವ ಜಯಂತಿ ಅಂಗವಾಗಿ ವ್ಯಾಸ-ದಾಸ ಸಾಹಿತ್ಯದಲ್ಲಿ ಅಪ್ರತಿಮ ಸೇವೆ ಸಲ್ಲಿಸುತ್ತಿರುವ ವಿದ್ವನ್ಮಣಿಗಳಿಗೆ ಬೆಂಗಳೂರು ಚಾಮರಾಜಪೇಟೆ ಶ್ರೀಮನ್ಮಾಧ್ವ ಸಂಘದಲ್ಲಿ ‘ಶ್ರೀಮಧ್ವ ವಿಜಯ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅ.೨೦ರಂದು ಸಂಜೆ ೬.೦೦ಗಂಟೆಗೆ ವಿಶ್ವ ಮಧ್ವಮತ ವೆಲ್‌ಫೇರ್ ಅಸೋಸಿಯೇಷನ್ ಆಯೋಜಿಸಿದೆ.
ಕನ್ನಡನಾಡಿನ ಹೆಮ್ಮೆಯ ಆಚಾರ್ಯರಾದ ವಿಶ್ವಗುರು ಮಧ್ವಾಚಾರ್ಯರ ಸಂದೇಶದ ಪ್ರಸಾರ ತನ್ಮೂಲಕ ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕೈಂಕರ‍್ಯ ಮಾಡುತ್ತಿರುವ ವಿಎಂಡಬ್ಲೂಎ ವತಿಯಿಂದ ಈ ಸಮಾರಂಭ ಏರ್ಪಡಿಸಿದ್ದು, ಅಂದು ಸಂಜೆ ೩.೦೦ ರಿಂದ ೫.೩೦ ರವರೆಗೆ ಗಾಂಧಿ ಬಜಾರ್ ಸೋಸಲೇ ವ್ಯಾಸರಾಜ ಮಠದಿಂದ ಚಾಮರಾಜಪೇಟೆ ಶ್ರೀಮನ್ಮಾಧ್ವ ಸಂಘದವರೆಗೆ ಬೃಹತ್ ಶೋಭಾಯಾತ್ರೆ ನಡೆಯಲಿದೆ.
ಸಭಾ ಕಾರ್ಯಕ್ರಮದ ದಿವ್ಯಸಾನ್ನಿಧ್ಯವನ್ನು ಮುಳಬಾಗಿಲು ಶ್ರೀಪಾದರಾಜ ಮಠದ ಶ್ರೀ ಸುಜಯನಿಧಿ ತೀರ್ಥರು ವಹಿಸುವರು. ಬೆಂಗಳೂರು ದಕ್ಷಿಣ ಸಂಸದ ಎಲ್.ಎಸ್.ತೇಜಸ್ವಿ ಸೂರ್ಯ , ಬಸವನಗುಡಿ ಶಾಸಕ ಎಲ್.ಎ.ರವಿಸುಬ್ರಮಣ್ಯ, ಚಿಕ್ಕಪೇಟೆ ಶಾಸಕ ಉದಯಗರುಡಾಚಾರ್ , ಗರುಡಾ ಫೌಂಡೇಷನ್ ಮುಖ್ಯಸ್ಥೆ ಮೇದಿನಿ ಉದಯಗರುಡಾಚಾರ್, ಎಕೆಬಿಎಂಎಸ್ ನಿಕಟಪೂರ್ವ ಉಪಾಧ್ಯಕ್ಷ ಆರ್.ಲಕ್ಷ್ಮಿಕಾಂತ್, ಚಾಮರಾಜಪೇಟೆ ಶ್ರೀಮನ್ಮಾಧ್ವ ಸಂಘದ ಅಧ್ಯಕ್ಷ ನಾಗೇಶ್, ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಮುಖ್ಯಅತಿಥಿಗಳಾಗಿ ಭಾಗವಹಿಸುವರು.
ವ್ಯಾಸ-ದಾಸ ಸಾಹಿತ್ಯದಲ್ಲಿ ಅಪ್ರತಿಮ ಸೇವೆ ಸಲ್ಲಿಸುತ್ತಿರುವ ವಿದ್ವನ್ಮಣಿಗಳಾದ ಅಂತಾರಾಷ್ಟ್ರೀಯ ಖ್ಯಾತಿಯ ಹರಿದಾಸ ಸಾಹಿತ್ಯ ವಿದ್ವಾಂಸ ಡಾ.ಅರಳುಮಲ್ಲಿಗೆ ಪಾರ್ಥಸಾರಥಿ, ಟಿಟಿಡಿ ಆಡಳಿತ ಮಂಡಳಿಯ ನಿಕಟಪೂರ‍್ವ ಸದಸ್ಯ ಮತ್ತು ಎಸ್‌ವಿಬಿಸಿ ನಿರ್ದೇಶಕ ಡಾ.ಡಿ.ಪಿ. ಅನಂತ , ಸಮಾಜ ಸೇವಕ ವಿದ್ವಾನ್ ಪ್ರಸನ್ನ ಹೆಬ್ಬಣಿ, ವಿಜಯಮಾಲಾ ಟ್ರಸ್ಟ್ ಸಂಸ್ಥಾಪಕಿ ಹರಿಣೀ ಪಗಡಾಲ ರವರುಗಳಿಗೆ ಮತ್ತು ಚಾಮರಾಜಪೇಟೆ ‘ಶ್ರೀಮನ್ಮಾಧ್ವ ಸಂಘ’ಕ್ಕೆ ‘ಶ್ರೀಮಧ್ವ ವಿಜಯ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ವಿಎಂಡಬ್ಲೂಎ ಸಂಸ್ಥಾಪಕ ಅಧ್ಯಕ್ಷ ಬಿ.ಕೆ.ವೆಂಕೋಬ ರಾವ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ, ವಿವರಗಳಿಗೆ : ೯೧೧೩೮ ೫೩೩೨೫