spot_img
spot_img

ಶ್ರೀ ರಾಮನವಮಿ

Must Read

- Advertisement -

ಹೃದಯ ಸಾಮ್ರಾಟ, ಮರ್ಯಾದಾ ಪುರುಷೋತ್ತಮ, ದಶರಥನಂದನ ಶ್ರೀರಾಮ ಹುಟ್ಟಿದ ದಿನವನ್ನು ಶ್ರೀರಾಮನವಮಿ ಹಬ್ಬವೆಂದು ಆಚರಣೆ ಮಾಡಲಾಗುತ್ತಿದ್ದು, ರಾಮನವಮಿ ಸಕಲ ಹಿಂದೂ ಧರ್ಮ ಸಂಜಾತರಿಗೂ ಭಾರತದಲ್ಲಿ ಒಂದು ಜನಪ್ರಿಯ ಧಾರ್ಮಿಕ ಹಬ್ಬವಾಗಿದೆ.

ಶ್ರೀರಾಮ ರಾಮಾಯಣದ ಕಥಾ ನಾಯಕನಾಗಿದ್ದು, ಆದಿಕಾಲದ ಭಾರತದ ಅಯೋಧ್ಯೆಯ ರಾಜನೆಂದು ಕರೆಯಲಾಗುತ್ತದೆ. ದಶರಥ ಮಹಾರಾಜ ಶ್ರೀರಾಮನ ತಂದೆಯಾಗಿದ್ದು, ಹಿಂದೂ ಸಂಪ್ರದಾಯದಲ್ಲಿ ರಾಮನನ್ನು ವಿಷ್ಣುವಿನ ಅವತಾರವಾಗಿ ಪೂಜಿಸಲಾಗುತ್ತದೆ. ರಾಮನವಮಿ ಹಬ್ಬವನ್ನು ಚೈತ್ರ ಮಾಸದ 9 ನೇ ದಿನದಂದು ಆಚರಣೆ ಮಾಡಲಾಗುತ್ತದೆ.

ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ ನವಮಿವರೆಗೆ ರಾಮಾಯಣವನ್ನು ಭಕ್ತಿ, ಶ್ರದ್ಧೆಗಳಿಂದ ಪಾರಾಯಣ ಮಾಡಿ, ನವಮಿ ದಿನ ರಾಮ ಪಟ್ಟಾಭಿಷೇಕ ಪಾರಾಯಣ ಮಾಡಿ ಹಬ್ಬವನ್ನು ಪೂರ್ಣಗೊಳಿಸುತ್ತಾರೆ.

- Advertisement -

ರಾಮನವಮಿ ಹಬ್ಬ ಅತ್ಯಂತ ಸರಳ ಹಾಗೂ ಸುಲಭವಾಗಿದ್ದು, ಈ ಹಬ್ಬವನ್ನು ದೇಶದಾದ್ಯಂತ ಬಹಳಷ್ಟು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತದೆ. ಪ್ರಮುಖವಾಗಿ ಉತ್ತರ ಭಾರತದಲ್ಲಂತೂ ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ.
ಶ್ರೀರಾಮ ಜನಿಸಿದ ಸ್ಥಳ ಅಯೋಧ್ಯೆಯಲ್ಲಿ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಹಬ್ಬದ ದಿನದಂದು ರಾಮನ ಭಜನೆ, ಕೀರ್ತನೆ ಹಾಗೂ ಮೆರವಣಿಗೆಗಳನ್ನು ನಡೆಸಲಾಗುತ್ತದೆ. ರಾಮನವಮಿಯಂದು ಸೂರ್ಯ ದೇವನ ಪ್ರಾರ್ಥನೆಯೊಂದಿಗೆ ಹಬ್ಬ ಆರಂಭವಾಗುತ್ತದೆ. ಏಕೆಂದರೆ, ಶ್ರೀರಾಮನು ಸೂರ್ಯವಂಶಸ್ಥನಾಗಿದ್ದು, ಶಕ್ತಿಯ ಪ್ರತೀಕವಾಗಿರುವ ಸೂರ್ಯ ದೇವರ ಆರಾಧನೆ ಮೂಲಕ ರಾಮನವಮಿ ಆರಂಭವಾಗುತ್ತದೆ. ಹಬ್ಬದ ದಿನದಂದು ರಾಮನ ಸ್ತೋತ್ರ ಹಾಗೂ ಭಜನೆಗಳನ್ನು ಹಾಡುವ ಮೂಲಕ ದೇವರನ್ನು ಸಂಪ್ರೀತಿಗೊಳಿಸಲಾಗುತ್ತದೆ.

ಈ ದಿನ ದೇಶದ ಹಲವು ರಾಮ ಮಂದಿರಗಳಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಲಾಗುತ್ತದೆ. ಈಗಿನ ಅಯೋಧ್ಯೆಯಲ್ಲಿ, ತಮಿಳುನಾಡಿನ ರಾಮೇಶ್ವರಂನಲ್ಲಿ ರಾಮನ ಪೂಜೆಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಕರ್ನಾಟಕದಲ್ಲೂ ಕರ್ನಾಟಕ ಸಂಗೀತ ಮತ್ತು ಹಿಂದೂಸ್ತಾನಿ ಸಂಗೀತ ಕಛೇರಿಗಳನ್ನು ಆಯೋಜಿಸಲಾಗುತ್ತದೆ. ಕಾರ್ಯಕ್ರಮಗಳಲ್ಲಿ ಕರ್ನಾಟಕ ಹಾಗೂ ಇತರೆ ರಾಜ್ಯಗಳಿಂದ ಸಂಗೀತ ವಿದ್ವಾಂಸರು ಪಾಲ್ಗೊಳ್ಳುತ್ತಾರೆ.
ಹಬ್ಬದ ದಿನದಂದು ಪ್ರತಿಯೊಬ್ಬರೂ ಜಾತಿ, ಧರ್ಮವೆಂಬ ಕಟ್ಟಳೆಗಳನ್ನ ಬದಿಗೊತ್ತಿ ಕೋಸಂಬರಿ, ಮಜ್ಜಿಗೆ ಹಾಗೂ ಪಾನಕ ಗಳನ್ನು ಹಂಚುವ ಮೂಲಕ ಸೌಹಾರ್ದತೆಯನ್ನು ಮೆರೆಯುತ್ತಾರೆ. “ವಸುಧೈವ ಕುಟುಂಬಕಂ ಅಂದರೆ ಇಡೀ ವಿಶ್ವವೇ ಒಂದು ಕುಟುಂಬ” ಎಂಬುದನ್ನು ಜಗತ್ತಿಗೆ ಸಾರಿ ಹೇಳಲು ಇಂತಹ ಹಬ್ಬಗಳು ಮಹತ್ವಪೂರ್ಣವಾಗಿವೆ.

ರಾಮ ಮನೆದೇವರು ಇರುವವರು ಹಬ್ಬವನ್ನು 9 ದಿನಗಳ ಕಾಲ ಆಚರಣೆ ಮಾಡುತ್ತಾರೆ. ಚೈತ್ರ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ನವಮಿವರೆಗೆ ರಾಮಾಯಣ ಪಾರಾಯಣ ಮಾಡಿ, ನವಮಿ ದಿನ ರಾಮ ಪಟ್ಟಾಭಿಷೇಕ ಪಾರಾಯಣ ಮಾಡಿ ಹಬ್ಬವನ್ನು ಪೂರ್ಣಗೊಳಿಸುತ್ತಾರೆ. ಹೀಗೆ 9 ದಿನದ ರಾಮನ ಉತ್ಸವ ಆಚರಿಸಲಾಗುತ್ತದೆ.

- Advertisement -

ರಾಮನವಮಿ ಆಚರಣೆ ಅತ್ಯಂತ ಸರಳವಾಗಿದೆ. ಸಾಮಾನ್ಯವಾಗಿ ರಾಮ ಪಟ್ಟಾಭಿಷೇಕ, ರಾಮ ಪಂಚಾಯತನದ ಪಟವನ್ನು ಇಟ್ಟು ಪೂಜೆ ಮಾಡುತ್ತಾರೆ, ಇದರಲ್ಲಿ ಶ್ರೀರಾಮನ ಜೊತೆಗೆ ಎಲ್ಲಾ ಸಹೋದರರು ಇರುತ್ತಾರೆ. ಶ್ರೀರಾಮಚಂದ್ರನಿಗೆ ಷೋಡಶೋಪಚಾರದಿಂದ ಪೂಜೆ ಮಾಡಬೇಕು. ಪಾನಕ ಕೋಸಂಬರಿಗಳನ್ನು ನೈವೇದ್ಯ ಮಾಡಿ ಇತರರಿಗೆ ಹಂಚಲಾಗುತ್ತದೆ. ರಾಮನ ಭಜನೆ, ಹಾಡುಗಳಿಂದ ರಾಮನ ಧ್ಯಾನ ಮಾಡುತ್ತಾರೆ. ಮತ್ತೊಂದು ವಿಶೇಷವೆಂದರೆ, ರಾಮನಾಮ ಬರೆಯುವುದು. ರಾಮನಾಮ ಜಪಿಸಿದರೆ ರಾಮ ನಮ್ಮನ್ನು ಸಂರಕ್ಷಿಸುತ್ತಾನೆಂಬ ನಂಬಿಕೆ ಇದೆ.

ಹೇಮಂತ ಚಿನ್ನು
ಕರ್ನಾಟಕ ಶಿಕ್ಷಕರ ಬಳಗ

- Advertisement -
- Advertisement -

Latest News

“ಅಪ್ನಾದೇಶ” ಬೆಳೆದು ಬಂದ ಹಿನ್ನೆಲೆ

೨೦೧೧ ರಲ್ಲಿ ಧಾರವಾಡದಲ್ಲಿ “ಅಪ್ನಾದೇಶ” ಎಂಬ ಸಂಘಟನೆ ಜನ್ಮ ತಾಳಿತು.ಇದಕ್ಕೆ ಸ್ಪೂರ್ತಿ ಅಂದಿನ ಐ.ಎ.ಎಸ್. ಅಧಿಕಾರಿ ಭರತಲಾಲ್ ಮೀನಾ. ಶಿಕ್ಷಕರು, ಸಮಾಜ ಚಿಂತಕರು, ನ್ಯಾಯವಾದಿಗಳು, ವಿವಿಧ...
- Advertisement -

More Articles Like This

- Advertisement -
close
error: Content is protected !!
Join WhatsApp Group