spot_img
spot_img

ಸಿದ್ಧರಾಮಯ್ಯ ಜನ್ಮದಿನ ನಿಮಿತ್ತ ನವ ಸಂಕಲ್ಪ ಚಿಂತನಾ ಶಿಬಿರ

Must Read

spot_img

ಬೀದರ – ಮಾಜಿ ಮುಖ್ಯಮಂತ್ರಿ ಸಿದ್ರಾಮಯ್ಯ ಸರ್ಕಾರ ಇದ್ದಾಗ ಹಲವು ಒಳ್ಳೆಯ ಕೆಲಸ ಮಾಡಿದ್ದಾರೆ. ಹಲವು ಯೋಜನೆ ಜಾರಿಗೆ ತಂದಿದ್ದಾರೆ.ಅದಕ್ಕಾಗಿ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಈ ನವ ಸಂಕಲ್ಪ ಚಿಂತನಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಹೇಳಿದರು.

ಬೀದರ್ ನಲ್ಲಿ ಈಶ್ವರ ಖಂಡ್ರೆ ನೇತೃತ್ವದಲ್ಲಿ ಝೀರಾ ಕನ್ವೆನ್ಷಲ್ ಹಾಲ್‍ನಲ್ಲಿ ಸೋಮವಾರ ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ನವ ಸಂಕಲ್ಪ ಶಿಬಿರದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿದರು.

ಸಿದ್ಧರಾಮಯ್ಯ ಅವರ ಅಭಿಮಾನಿಗಳು ಅವರ ೭೫ ನೇ ವರ್ಷದ ಹುಟ್ಟು ಹಬ್ಬ ಆಚರಣೆ ಮಾಡುತ್ತಿದ್ದಾರೆ. ನಾವು ಕೂಡ ಸಿದ್ರಾಮಯ್ಯ ಅಭಿಮಾನಿ ಇದ್ದೇವೆ ಎಂದು ಹೇಳಿದರು.

ನವ ಸಂಕಲ್ಪ ಚಿಂತನಾ ಶಿಬಿರ ಹೆಸರಿನಲ್ಲಿ ಸಿದ್ದಾ ರಾಮಯ್ಯ ಹುಟ್ಟು ಹಬ್ಬ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಸಿದ್ಧರಾಮಯ್ಯ ಯಾವಾಗೂ ಜನ್ಮ ದಿನ ಆಚರಿಸಿಕೊಂಡಿಲ್ಲ ಆದ್ದರಿಂದ ಅವರ ಎಲ್ಲಾ ಅಭಿಮಾನಿಗಳು ಸೇರಿಕೊಂಡು ಅವರ ೭೫ ನೇ ವರ್ಷದ ಅಮೃತ ಮಹೋತ್ಸವ ಆಚರಿಸಲಿದ್ದಾರೆ. ಇದನ್ನು ಯಾವುದೇ ಶಕ್ತಿ ಪ್ರದರ್ಶನ ಅನ್ನುವುದಾಗಲಿ ಬೇರೆ ರೀತಿಯಾಗಲಿ ಪರಿಗಣಿಸಬಾರದು ಎಂದು ಈಶ್ವರ ಖಂಡ್ರೆ ಹೇಳಿದರು.


ವರದಿ: ನಂದಕುಮಾರ ಕರಂಜೆ, ಬೀದರ.

- Advertisement -
- Advertisement -

Latest News

ಸಾಹಿತ್ಯ ಕ್ಷೇತ್ರದಲ್ಲಿ ರಶ್ಮಿಯಾಗಿ ಹೊಳೆದ ವಿ.ಕೃ.ಗೋಕಾಕ್!

ಬೇರೆಯವರ ಮೇಲೆ ಅವಲಂಬಿತವಾದ ಬದುಕು, ಸಾಧನೆ “ಮರವನ್ನು ಆಶ್ರಯಿಸಿ ಬೆಳೆದ ಬಳ್ಳಿಯಂತೆ” ಆಶ್ರಯ ತಪ್ಪಿದಾಗ ಅದು ನೆಲಕಚ್ಚುವುದು ಎಂದವರು ವಿನಾಯಕ ಕೃಷ್ಣ ಗೋಕಾಕ್ (ವಿ.ಕೃ.ಗೋಕಾಕ್). ಕನ್ನಡಕ್ಕೆ...
- Advertisement -

More Articles Like This

- Advertisement -
close
error: Content is protected !!