spot_img
spot_img

ಸಿಂದಗಿ: ಆರ್ ಡಿ ಪಾಟೀಲ ಕಾಲೇಜು ವಿದ್ಯಾರ್ಥಿಗಳ ಸಾಧನೆ

Must Read

ಸಿಂದಗಿ: 2021-22 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಆರ್.ಡಿ.ಪಾಟೀಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತಶ್ರೇಣಿಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ಕಲಾ ವಿಭಾಗದ ವಿದ್ಯಾರ್ಥಿ ಕುಮಾರ ಭೀಮಾಶಂಕರ ದೇವಪ್ಪ 578 (96.33%), ನಾಗರಾಜ ಹಂಚಿನಾಳ 578 (96.33%) ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಅಲ್ಲದೆ ಕುಮಾರಿ ಮೇಘಾ ಹೂಗಾರ 577 (96.16%), ಸಿದ್ದಣ್ಣ ಕಂಬಾರ 577 (96.16%), ಐಶ್ವರ್ಯ ಲಾಳಸಂಗಿ 575 (95.8%) ಸೇರಿದಂತೆ 93 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಕುಮಾರಿ ಐಶ್ವರ್ಯ ಬಿರಾದಾರ 577 (96.16%), ಚಂದ್ರಕಾಂತ ಬಬಲೇಶ್ವರ 574 (95.66%), ವಿಲಾಸ ಪಾಟೀಲ 569 (94.83%) ಸೇರಿದಂತೆ ವಾಣಿಜ್ಯ ವಿಭಾಗದಲ್ಲಿ 31 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಕುಮಾರಿ ಭಾಗ್ಯಶ್ರೀ ಹಳ್ಳಿ 559 (93.16%), ರೇವಣಸಿದ್ಧ ಕರಿಗೌಡರ 552 (92%), ಶಾಂತಗೌಡ ಸಾಸನೂರ 550 (91.66%) ಸೇರಿದಂತೆ ಒಟ್ಟು ವಿಜ್ಞಾನ ವಿಭಾಗದಲ್ಲಿ 8 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ.

ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದ ಸೇರಿದಂತೆ ಒಟ್ಟು 132 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಹಾಗೂ ಕಲಾ ವಿಭಾಗದಲ್ಲಿ ಪ್ರಥಮ ದರ್ಜೆ 178, ದ್ವಿತೀಯ ದರ್ಜೆ 89, ತೃತೀಯ ದರ್ಜೆ 39 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ ಪ್ರಥಮ ದರ್ಜೆ 41, ದ್ವಿತೀಯ ದರ್ಜೆ 21, ತೃತೀಯ ದರ್ಜೆ 16 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ಪ್ರಥಮ ದರ್ಜೆ 60, ದ್ವಿತೀಯ ದರ್ಜೆ 25, ತೃತೀಯ ದರ್ಜೆ 5 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ ಕಾಲೇಜಿನ ಒಟ್ಟು ಪ್ರತಿಶತ 72% ರಷ್ಟಾಗಿದೆ.

ಇವರ ಸಾಧನೆಗೆ ಸಂಸ್ಥೆಯ ಚೇರಮನ್ನರಾದ ಪೂಜ್ಯಶ್ರೀ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ಪ್ರಾಚಾರ್ಯ ವಿಜಯಕುಮಾರ ಜಿರ್ಲಿ ಮತ್ತು ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

- Advertisement -
- Advertisement -

Latest News

ವಿರಾಟಪುರ ವಿರಾಗಿ ಚಿತ್ರದ ವಾಲ್ ಪೋಸ್ಟರ್ ಬಿಡುಗಡೆ

ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು. ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ...
- Advertisement -

More Articles Like This

- Advertisement -
close
error: Content is protected !!