ಡಿ.೧೪ ರಂದು ಸಿಂದಗಿ ತಾಲೂಕ ಸಾಹಿತ್ಯ ಸಮ್ಮೇಳನ

Must Read

ಸಿಂದಗಿ- ಆಲಮೇಲ ತಾಲೂಕಾ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನವು ಆಲಮೇಲ ತಾಲೂಕಿನ ವಿಭೂತಿಹಳ್ಳಿ ಗ್ರಾಮದ ಶ್ರೀ ಭಾಗ್ಯವಂತಿ ದೇವಸ್ಥಾನದ ಆವರಣದಲ್ಲಿ ಡಿ.೧೪ ರಂದು ಜರುಗಲಿದ್ದು ಆ ಹಿನ್ನೆಲೆಯಲ್ಲಿ ಮಂಗಳವಾರ ಸಿಂದಗಿಯಲ್ಲಿ ಶಾಸಕ ಅಶೋಕ ಮನಗೂಳಿ ಸಮ್ಮೇಳನದ ಲಾಂಛನವನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಅವರು ಮಾತನಾಡಿ, ಕನ್ನಡ ಸಾಹಿತ್ಯ ಸಮ್ಮೇಳನವು ಅತ್ಯಂತ ಯಶಸ್ವಿಯಾಗಿ ಜರುಗಲು ಎಲ್ಲ ಸೌಕರ್ಯಗಳನ್ನು ಮಾಡಲು ನಾನು ಸಿದ್ದನಿದ್ದೇನೆ. ಸಂಘಟಕರು ಎಲ್ಲರನ್ನು ತೊಡಗಿಸಿಕೊಂಡು ಕಾರ್ಯಚಟುವಟಿಕೆಗಳನ್ನು ಮಾಡಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರು, ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ, ಆಲಮೇಲ ತಾಲೂಕಾಧ್ಯಕ್ಷ ಶಿವಶರಣ ಗುಂದಗಿ, ಸಿಂದಗಿ ತಾಲೂಕಾಧ್ಯಕ್ಷ ಶಿವಾನಂದ ಬಡಾನೂರ, ಗಿರೀಶ ಗತಾಟೆ, ರಮೇಶ ಭಂಟನೂರ, ಡಾ.ರವಿ ಗೋಲಾ, ಅಪ್ಪುಗೌಡ ಪಾಟೀಲ, ರವಿರಾಜ ದೇವರಮನಿ, ಸಿದ್ದಲಿಂಗ ಕಿಣಗಿ ಸೇರಿದಂತೆ ಇತರರು ಇದ್ದರು.

Latest News

ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...

More Articles Like This

error: Content is protected !!
Join WhatsApp Group