- Advertisement -
ಸಿಂದಗಿ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ವಿಜಯಪುರ ಘಟಕದ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಸಂಜೀವ ಪರಮಣ್ಣ ದೇಸಾಯಿ ಅವರನ್ನು ನೇಮಕ ಮಾಡಲಾಗಿದೆ ಎಂದು ಕರ್ನಾಟಕ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಸಿದ್ದಲಿಂಗರೆಡ್ಡಿ ಕೊಲ್ಲೂರು ತಿಳಿಸಿದ್ದಾರೆ.
ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ತತ್ವ ಸಿದ್ದಾಂತ, ಶಿಸ್ತು ಮತ್ತು ನಾವೆಲ್ಲರೂ ಒಂದೇ ಎಂದು ಕಾರ್ಯನಿರ್ವಹಿಸುವುದು ತಾವು ತಮ್ಮ ಜವಾಬ್ದಾರಿಯನ್ನು ವಹಿಸಿಕೊಂಡು ಸಂಘಟನೆ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ವೀರಶೈವ ಲಿಂಗಾಯತರನ್ನು ಒಂದು ಗೂಡಿಸಿ, ಅವರ ಕಲ್ಯಾಣಕ್ಕಾಗಿ ಶ್ರಮಿಸಬೇಕೆಂದು ಸೂಚಿಸಿದೆ.