ಸಿಂದಗಿ: ವಿಜೃಂಭಣೆಯಿಂದ ಜರುಗಿದ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವ

Must Read

ಸಿಂದಗಿ: ಪಟ್ಟಣದ ಆರಾಧ್ಯ ದೇವತೆ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವವು ಶುಕ್ರವಾರ ವಿಜೃಂಭಣೆಯಿಂದ ಜರುಗಿತು. ಬೆಳಿಗ್ಗೆ ರಥೋತ್ಸವ ಹಾಗೂ ಪಲ್ಲಕ್ಕಿ ಉತ್ಸವಗಳು ಭಕ್ತ ಸಮೂಹದೊಂದಿಗೆ ದೇವಸ್ಥಾನದಿಂದ ನಂದಿಕೋಲ ಹಾಗೂ ಸಕಲವಾದ್ಯಗಳೊಂದಿಗೆ ಪ್ರಾರಂಭವಾಯಿತು. ಶ್ರೀ ಸಂಗಮೇಶ್ವರ ಮತ್ತು ಭ್ರಮರಾಂಬಿಕಾ ಉತ್ಸವ ಮೂರ್ತಿಗಳ ಪಲ್ಲಕ್ಕಿ ಉತ್ಸವದ ಮೆರವಣಿಗೆ ಮತ್ತು ರಥೋತ್ಸವ ನೀಲಗಂಗಾ ದೇವಸ್ಥಾನದ ಮಾರ್ಗವಾಗಿ ಹಳೆ ಬಜಾರದಲ್ಲಿನ ಶ್ರೀ ಬಸವೇಶ್ವರ ದೇವಸ್ಥಾನದವರೆಗೆ ನಡೆಯಿತು.

ದೇವಸ್ಥಾನದಲ್ಲಿ ಮತ್ತು ಮಾರ್ಗ ಮಧ್ಯ ನೀಲಗಂಗಾ ದೇವಸ್ಥಾನ ಹಾಗೂ ಹಳೆ ಬಜಾರದ ಮಧ್ಯದಲ್ಲಿ ವಿಶ್ವನಾಥ ಬಡಿಗೇರ ಹಾಗೂ ಸಂಗಡಿಗರು ಪುರವಂತರ ಸೇವೆ ಸಲ್ಲಿಸಿದರು. ಪುರವಂತರ ಸೇವೆಯೊಂದಿಗೆ ವಿವಿಧ ಕಾರ್ಯಕ್ರಮಗಳು ಜರುಗಿದವು. ಮಾರ್ಗದುದ್ದಕ್ಕೂ ಭಕ್ತಾದಿಗಳು ಉತ್ಸವ ಪಲ್ಲಕ್ಕಿಯಲ್ಲಿರುವ  ಶ್ರೀ ಸಂಗಮೇಶ್ವರ ಮತ್ತು ಭ್ರಮರಾಂಬಿಕಾ ಉತ್ಸವ ಮೂರ್ತಿಗಳಿಗೆ ಆರತಿ ಮತ್ತು ಪೂಜೆ ಸಲ್ಲಿಸೂವ ಮೂಲಕ ದೇವರ ಕೃಪೆಗೆ ಪಾತ್ರರಾದರು. 

ಸ್ಥಳಿ ಸಾರಂಗಮಠ-ಗಚ್ಚಿನಮಠದ ಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಶ್ರೀ ಭೀಮಾಶಂಕರಮಠದ ಶ್ರೀ ಸದ್ಗುರು ದತ್ತಪ್ಪಯ್ಯ ಮಹಾಸ್ವಾಮಿಗಳು ಅವರು ರಥೋತ್ಸವಕ್ಕೆ ಚಾಲನೆ ನೀಡಿದರು. ಪಂಡಿತ ಕುಲಕರ್ಣಿ, ವಿಜಯ ಕುಲಕರ್ಣಿ, ನೀಲಗಂಗಾದೇವಿ ದೇವಸ್ಥಾನದ ಧರ್ಮದರ್ಶಿ ಸುನೀಲ ದೇವರಮನಿ, ಶ್ರೀಶೈಲ ನಂದಿಕೋಲ, ಶ್ರೀ ಸಂಗಮೇಶ್ವರ, ಮಲ್ಲಿಕಾರ್ಜುನ ಹಾಗೂ ಬೊಮ್ಮಲಿಂಗೇಶ್ವರ ದೇವಸ್ಥಾನಗಳ ಅರ್ಚಕರು, ಸ್ಥಳೀಯ  ಹಾಗೂ ಸುತ್ತಮುತ್ತಲಿನ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದರು. ಪಲ್ಲಕ್ಕಿ ಉತ್ಸವ ಹಾಗೂ ರಥೋತ್ಸವ ಮರಳಿ ದೇವಸ್ಥಾನಕ್ಕೆ ಬಂದ ನಂತರ ಭಕ್ತರು ನೈವೇದ್ಯ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group