spot_img
spot_img

ಸಿಂದಗಿ: ವಲಯ ಮಟ್ಟದ ವ್ಹಾಲಿಬಾಲ್ ಪಂದ್ಯಾವಳಿ ದಿ. 10 ರಿಂದ

Must Read

spot_img

ಸಿಂದಗಿ: ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಸಿ.ಎಮ್.ಮನಗೂಳಿ ಕಲಾ,ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ ಮತ್ತು ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಎರಡು ದಿನಗಳ ಕಾಲ 3 ನೇ ವಲಯ (ವಿಜಯಪುರ) ಮಟ್ಟದ ಪುರುಷರ ವ್ಹಾಲಿಬಾಲ್ ಪಂದ್ಯಾವಳಿಯನ್ನು ಆ.10 ಮತ್ತು 11 ರಂದು ಸಿ.ಎಮ್.ಮನಗೂಳಿ ಕಾಲೇಜಿನ ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ಜರುಗಲಿವೆ ಎಂದು ಸಂಸ್ಥೆಯ ಅಧ್ಯಕ್ಷ ಅಶೋಕ ಮನಗೂಳಿ ಹೇಳಿದರು,

ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಕಛೇರಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಆಲಮೇಲ ವಿರಕ್ತಮಠದ ಶ್ರೀ ಜಗದೇವ ಮಲ್ಲಿಬೊಮ್ಮಯ್ಯ ಶ್ರೀಗಳ ಸಾನಿಧ್ಯತೆಯಲ್ಲಿ ವಿಧಾನ ಪರಿಷತ್ತ ಸದಸ್ಯ ಸುನೀಲಗೌಡ ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ, ಸಂಸ್ಥೆಯ ಅಧ್ಯಕ್ಷ ಅಶೋಕ ಮನಗೂಳಿ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಶಿವಪ್ಪಗೌಡ ಬಿರಾದಾರ, ಬಸನಗೌಡ ಪಾಟೀಲ, ಶಂಕರಗೌಡ ಪಾಟೀಲ, ವಿಠೋಬಾ ಮಾಗಣಗೇರಿ ಮತ್ತು ಎಚ್.ಎಮ್.ಉತ್ನಾಳ, ಎ.ಆರ್.ಹೆಗ್ಗಣದೊಡ್ಡಿ, ಸಂಗು ಬಿರಾದಾರ, ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ. ಅಂದು ಸಂಜೆ 5 ಗಂಟೆಗೆ ಪುರಸಭೆಯ ಉಪಾಧ್ಯಕ್ಷ ಹಾಸಿಂಪೀರ ಆಳಂದ ಪಾರಿತೋಷಕ ವಿತರಿಸಲಿದ್ದಾರೆ.

ಅ.11 ರಂದು ಬೆಳಿಗ್ಗೆ 9 ಗಂಟೆಗೆ ಅಂತರ ವಲಯ ಮಟ್ಟದ ಪುರುಷರ ವ್ಹಾಲಿಬಾಲ್ ಪಂದ್ಯಾವಳಿಯ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಸಾನಿಧ್ಯತೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಅಶೋಕ ಮನಗೂಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕಲಬುರಗಿ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ.ಎಮ್.ಎಸ್.ಪಾಸೋಡಿ, ಬೆಳಗಾಂವ ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಕ್ರೀಡಾ ನಿರ್ದೇಶಕ ಜಗದೀಶ ಗಸ್ತಿ, ಸಂಸ್ಥೆಯ ಉಪಾಧ್ಯಕ್ಷ ಬಿ.ಜಿ.ಪಾಟೀಲ ಬಿಂಜಲಭಾವಿ, ನಿರ್ದೇಶಕರಾದ ಡಾ.ಚನ್ನವೀರಪ್ಪ ಮನಗೂಳಿ, ಬಿ.ಜಿ.ನೆಲ್ಲಗಿ, ವಿಶ್ವನಾಥಗೌಡ ಪಾಟೀಲ ಹಾಗೂ ಜಿಪಿಪಿ ಕಾಲೇಜಿನ ದೈಹಿಕ ನಿರ್ದೇಶಕ ರವಿ ಗೋಲಾ, ಕೆ.ಎಚ್.ಸೋಮಾಪೂರ, ಎಸ್.ಎ.ಜಾಗೀರದಾರ, ಸತೀಶ ಬಸರಕೊಡ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ. ಅಂದು ಸಂಜೆ 5 ಗಂಟೆಗೆ ಪುರಸಭೆಯ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಪಾರಿತೋಷಕ ವಿತರಿಸಲಿದ್ದಾರೆ ಎಂದು ತಿಳಿಸಿದರು.

ಈ ಪತ್ರಿಕಾ ಗೋಷ್ಠಿಯಲ್ಲಿ ಕಾಲೇಜಿನ ಪ್ರಾಚಾರ್ಯ ಎಮ್.ಜಿ.ಬಿರಾದಾರ, ದೈಹಿಕ ನಿರ್ದೇಶಕ ಡಾ.ಅಂಬರೀಶ ಬಿರಾದಾರ ಮತ್ತು ಇತರರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಪಂಚಮಸಾಲಿ ಸಮಾಜದ ಹೋರಾಟಕ್ಕೆ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಘೋಷಣೆ ಮೂಡಲಗಿ: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ...
- Advertisement -

More Articles Like This

- Advertisement -
close
error: Content is protected !!