ಶಿಕ್ಷಕ ವೃತ್ತಿಯಲ್ಲಿ ಸಮಾಜ ಸೇವೆ ಮತ್ತು ಸೇವಾ ಮನೋಭಾವ ಅತೀ ಮುಖ್ಯ – ಎ.ಎನ್.ಕಂಬೋಗಿ

Must Read

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...

ಕಾಂಗ್ರೆಸ್ ಸರ್ಕಾರದ ಕೆಲಸಗಳು ಅದರ ಗೆಲುವಿಗೆ ಕಾರಣವಾಗುತ್ತದೆ – ಸುಜಾತಾ ಕಳ್ಳಿಮನಿ

ಸಿಂದಗಿ: ಸಿದ್ದರಾಮಯ್ಯನವರು ಐದು ವರ್ಷದ ಅಧಿಕಾರದ ಅವಧಿಯಲ್ಲಿ ಈ ಕರುನಾಡಿಗೆ ಬಡವರ ಪರ, ರೈತರ ಪರ ಜಾರಿಗೆ ತಂದ ಯೋಜನೆಗಳು ಈ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಬಿಜೆಪಿ ಅಲೆಮಾರಿ ಜನಾಂಗಕ್ಕೆ ಸುಳ್ಳು ಹೇಳಿ ಮತ ಪಡೆಯುತ್ತಿದೆ – ಮೇಘರಾಜ್ ಆರೋಪ

ಸಿಂದಗಿ: ಬಿಜೆಪಿಯ ಸರ್ಕಾರ  ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ  ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಆಶ್ರಯ ಮನೆಗಳನ್ನು  ಮಂಜೂರು ಮಾಡದೆ ಕೇವಲ ಕಾಗದ ಪತ್ರದಲ್ಲಿ ಮಂಜೂರು...

ಸವದತ್ತಿಃ ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಉತ್ತಮವಾದ ಸೇವಾ ಮನೋಭಾವ ಹೊಂದಿರುವ ಸಂಸ್ಥೆಯಾಗಿದ್ದು, ಈ ಕಾರಣದಿಂದಲೇ ಇಂದು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿದೆ, ಫಲಾಪೇಕ್ಷೆ ಇಲ್ಲದ ಇಂತಹ ಸೇವಾ ಮನೋಭಾವ ಶ್ಲ್ಲಾಘನೀಯ. ಶಿಕ್ಷಕರಾದ ನಾವೆಲ್ಲರೂ ಇಂತಹ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸವದತ್ತಿ ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಎನ್.ಕಂಬೋಗಿ ಅಭಿಪ್ರಾಯ ಪಟ್ಟರು.

ಅವರು ಸ್ಥಳೀಯ ಕೆ.ಎಲ್.ಇ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ಸವದತ್ತಿ ತಾಲೂಕಾ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ನವೀಕರಣ ಮತ್ತು ಪುನಶ್ಚೇತನ ತರಬೇತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಿಕ್ಷಕ ಸಂಘದ ಅಧ್ಯಕ್ಷರಾದ ಎಚ್.ಆರ್.ಪೆಟ್ಲೂರ “ಸಮಾಜಸೇವೆಗಾಗಿ ಹಲವಾರು ಸಂಘ ಸಂಸ್ಥೆಗಳು ಇದ್ದರೂ ಸಹ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಅವುಗಳೆಲ್ಲವನ್ನು ಮೀರಿ ಮೂಂಚೂಣಿಯಲ್ಲಿದೆ.ಶಿಕ್ಷಕರು ತಮ್ಮ ವೃತ್ತಿಬದುಕಿನಲ್ಲಿ ತಾವೂ ಸೇವಾಭಾವವನ್ನು ರೂಢಿಸಿಕೊಳ್ಳುವುದಲ್ಲದೇ ಮಕ್ಕಳಲ್ಲಿಯೂ ನೈತಿಕತೆಯ ಮೂಲಕ ಸೇವಾಮನೋಭಾವವನ್ನು ತುಂಬಬೇಕು.ನನಗೆ ಇಂದು ಸನ್ಮಾನ ನೀಡಿ ಗೌರವಿಸಿದ್ದಕ್ಕೆ ವಂದನೆಗಳು.” ಎಂದರು.

- Advertisement -

ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕಾ ನೂಡಲ್ ಶಿಕ್ಷಕ ಎನ್.ಎನ್.ಕಬ್ಬೂರ “ಮಕ್ಕಳಲ್ಲಿ ದೇಶಾಭಿಮಾನ, ಶಿಸ್ತು, ನಾಯಕತ್ವದ ಗುಣಗಳನ್ನು ಮೂಡಿಸಲು ಪ್ರಾಥಮಿಕ ಹಂತದಲ್ಲಿಯೇ ಸ್ಕೌಟ್ಸ್ ಸಹಕಾರಿಯಾಗಿದೆ” ಎಂದರು. ಇದೇ ಸಂದರ್ಭದಲ್ಲಿ ಸ್ಕೌಟ್ ಮತ್ತು ಗೈಡ್ಸನಲ್ಲಿ ಉತ್ತಮ ಸಾಧನೆ ಮಾಡಿದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ “ಹಗಲು-ಕನಸು” ಮತ್ತು ತಾಲೂಕಾ ಘಟಕದಿಂದ “ಸ್ಕೌಟ್ಸ್ ಸಾಹಿತ್ಯ” ಪುಸ್ತಕಗಳನ್ನು ಎಲ್ಲರಿಗೂ ವಿತರಿಸಲಾಯಿತು.

ನೂರಕ್ಕೂ ಹೆಚ್ಚು ಘಟಕಗಳನ್ನು ನವೀಕರಣ ಮಾಡಲಾಯಿತು. ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣಾಧಿಕಾರಿ ವಾಯ್,ಎಮ್.ಶಿಂಧೆ, ಕೆ.ಎಲ್.ಇ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವರ್ಷಾ ಗಾಂವ್ಕರ, ಡಿಓಸಿ ಬಿ.ಜಿ.ಜನಕಟ್ಟಿ ಇದ್ದರು. ಶಿಕ್ಷಕ ಎಸ್.ಎಸ್.ಕುಮೋಜಿ ನಿರೂಪಿಸಿದರು, ಆರ್.ಎಸ್.ಬಡಿಗೇರ ವಂದಿಸಿದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...
- Advertisement -

More Articles Like This

- Advertisement -
close
error: Content is protected !!