ಸಿಂದಗಿ: ಸಹಕಾರಿ ಸಂಘಗಳು ಗ್ರಾಮೀಣ ಭಾಗದ ರೈತಾಪಿ ಜನರು ಆರ್ಥಿಕವಾಗಿ ಸಬಲರಾಗಲು ನೆರವಾಗುತ್ತವೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ವಿದ್ಯಾನಗರದಲ್ಲಿರುವ ಬ್ಯಾಕೋಡ ಪಿಕೆಪಿಎಸ್ ಕಾರ್ಯದರ್ಶಿ ಶೇಖರಗೌಡ ಬಿರಾದಾರ ಕುಟುಂಬದ ವತಿಯಿಂದ ಶಾಸಕ ಅಶೋಕ ಮನಗೂಳಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಜಮೀನುಗಳ ಬಿತ್ತನೆಗಾಗಿ ಬೀಜ ಗೊಬ್ಬರ ಸೇರಿದಂತೆ ಅನೇಕ ಪರಿಕರಗಳನ್ನು ಸೊಸಾಯಿಟಿಗಳ ಮೂಲಕ ಸಹಾಯ ಮಾಡುವ ಸಹಕಾರಿ ಸಂಘಗಳ ಕಾರ್ಯ ಶ್ಲಾಘನೀಯ ಎಂದು ಹೇಳಿದ ಅವರು, ಶಾಸಕನಾಗಿ ಪ್ರಪ್ರಥಮ ಬಾರಿಗೆ ರಾಜಕೀಯ ಪ್ರವೇಶ ಮಾಡಿದ್ದೇನೆ ನನ್ನ ತಂದೆ ದಿ. ಮಾಜಿ ಸಚಿವ ಎಂ.ಸಿ.ಮನಗೂಳಿ ಅವರ ಒಡನಾಟದಲ್ಲಿರುವ ಹಿರಿಯರ ಮಾರ್ಗದರ್ಶನದಲ್ಲಿ ಈ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕಾರ್ಯ ಪ್ರವೃತ್ತನಾಗುತ್ತೇನೆ ನಿಮ್ಮೆಲ್ಲರ ಸಹಕಾರ ಅತ್ಯಗತ್ಯ. ಅಲ್ಲದೆ ಗ್ರಾಮೀಣ ಭಾಗದಲ್ಲಿರುವ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿದಾದ್ದರೆ ಸಮಸ್ಯೆಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿ ಸೌಲಭ್ಯಗಳನ್ನು ಒದಗಿಸಲು ಅನುಕೂಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರರಾದ ಸೋಮನಗೌಡ ಬಿರಾದಾರ, ಗುರುಗೌಡ ಬಿರಾದಾರ, ನಿವೃತ್ತ ಕಾರ್ಯದರ್ಶಿ ಮಲ್ಲನಗೌಡ ಪಾಟೀಲ, ಪಂಚಮಸಾಲಿ ಸಮಾಜ ಅಧ್ಯಕ್ಷ ಎಂ.ಎಂ.ಹಂಗರಗಿ, ಸಿ.ಎಂ.ಮನಗೂಳಿ ಕಾಲೇಜಿನ ಪ್ರಾದ್ಯಾಪಕ ಡಾ. ಅರವಿಂದ ಮನಗೂಳಿ, ನಿವೃತ್ತ ಗ್ರಂಥಪಾಲಕ ಸಿದ್ದಬಸವ ಕುಂಬಾರ, ಮುತ್ತು ಶಾಬಾದಿ, ಸಂಗನಗೌಡ ಪಾಟೀಲ ಅಗಸಬಾಳ, ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ನಾಗರಬೇಟ್ಟ, ಮಲ್ಲನಗೌಡ ಪಾಟೀಲ ಇಬ್ರಾಹೀಂಪೂರ, ತಿರುಪತಿ ಬಂಡಿವಡ್ಡರ, ಸೋಸಾಯಿಟಿ ಕಾರ್ಯದರ್ಶಿಗಳ ಸಂಘದ ಅದ್ಯಕ್ಷ ಸುರೇಶ ಮಲಗೊಂಡ, ಸುರೇಶ ಬೂಶೆಟ್ಟಿ, ಶರಣು ನಾಯ್ಕೋಡಿ, ರಮೇಶ ಇಜೇರಿ ಸೇರಿದಂತೆ ಅನೇಕರು ಇದ್ದರು.