spot_img
spot_img

ಮಾದಕವಸ್ತು ಮುಕ್ತ ಸಮಾಜ ನಿರ್ಮಾಣವಾಗಬೇಕು – ಪಿಎಸ್ಆಯ್ ಎಚ್.ಕೆ. ನೇರಳೆ

Must Read

spot_img
- Advertisement -

ಮೂಡಲಗಿ – ಅಮಲು ಬರಿಸುವ ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯ ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ತನ್ನ ಜೀವವನ್ನೇ ಕಳೆದುಕೊಳ್ಳುತ್ತಾನೆ ಹಾಗೂ ಆರ್ಥಿಕವಾಗಿ ದಿವಾಳಿ ಕೂಡ ಆಗುತ್ತಾನೆ. ಇದರಿಂದ ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ. ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು ಎಂದು ಘಟಪ್ರಭಾ ಪೋಲಿಸ್ ಠಾಣೆಯ ಪಿಎಸ್ಆಯ್ ಎಚ್.ಕೆ. ನೇರಳೆ ಹೇಳಿದರು.

ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಘಟಪ್ರಭಾ ಪೋಲಿಸ್ ಠಾಣೆ ಸಹಯೋಗದಲ್ಲಿ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಮಾದಕವಸ್ತು ವಿರೋಧಿ ದಿನಾಚರಣೆ ಹಾಗೂ ಲೈಂಗಿಕ ಕಿರುಕುಳ ತಡೆ ಜಾಗೃತಿ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡಿದರು.
ಲೈಂಗಿಕ ಕಿರುಕುಳದಿಂದ ಸಮಾಜದ ಶಾಂತಿ ಸುವ್ಯವಸ್ಥೆ ಹದಗೆಡುತ್ತದೆ. ಅಲ್ಲದೇ ಲಿಂಗ ಅಸಮಾನತೆ ಹೆಚ್ಚಾಗುತ್ತದೆ. ಸ್ತ್ರೀಯರನ್ನು ಗೌರವ ಭಾವನೆಯಿಂದ ಕಾಣಬೇಕೆಂದು ಕರೆ ನೀಡಿದರು.
ಪ್ರೊ. ಡಿ.ಎಸ್. ಹುಗ್ಗಿ ಮಾತನಾಡಿ, ವಿಶ್ವದಾದ್ಯಂತ ದುಶ್ಚಟಗಳಿಗೆ ಮಕ್ಕಳು ಮತ್ತು ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ. ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಣೆ ಕಾನೂನು ಬಾಹಿರ ಎಂದು ಗೊತ್ತಿದ್ದರೂ ಇದರ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಡ್ರಗ್‌ ಮಾಫಿಯಾ ಹತೋಟಿಗೆ ತರಲು ವಿಶ್ವದೆಲ್ಲೆಡೆ ಕಾನೂನು ಪ್ರಯತ್ನಗಳು ನಡೆಯುತ್ತಿವೆ. ಆದರೆ ಇದನ್ನು ಬುಡ ಸಮೇತ ಕಿತ್ತು ಹಾಕಲು ಸಾಧ್ಯವಾಗಿಲ್ಲ. ಪ್ರತಿಯೊಬ್ಬ ನಾಗರಿಕನೂ ಈ ಬಗ್ಗೆ ಜಾಗೃತಿ ಹೊಂದಿ ವಿಶ್ವವನ್ನು ಮಾದಕವಸ್ತುಗಳಿಂದ ಮುಕ್ತವಾಗಿಸುವ ಜವಾಬ್ದಾರಿ ತೆಗೆದುಕೊಳ್ಳಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಡಾ. ಎಂ.ಬಿ. ಕುಲಮೂರ, ಡಾ. ಕೆ.ಎಸ್. ಪರವ್ವಗೋಳ, ಎನ್ನೆಸ್ಸೆಸ್ ಕಾರ್ಯಕ್ರಮ ಅಧಿಕಾರಿ ಶಂಕರ ಎಂ. ನಿಂಗನೂರ, ವಸುಂದರಾ ಕಾಳೆ, ಬಿ.ಕೆ. ಸೊಂಟನವರ, ಕಾಲೇಜಿನ ಲೈಂಗಿಕ ಕಿರುಕುಳ ತಡೆ ಸಮಿತಿಯ ಸಂಯೋಜಕ ಬಿ.ಸಿ. ಮಾಳಿ, ವಿಲಾಸ ಕೆಳಗಡೆ, ಸಂತೋಷ ಜೋಡಕುರಳಿ ಇನ್ನಿತರರು ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ದೂರದೃಷ್ಟಿಯ ನಾಯಕ ಎಸ್ ಎಮ್ ಕೃಷ್ಣ

ಸಿಂದಗಿ: ಸರಕಾರ ಆರ್ಥಿಕ ಅವಲಂಬನೆ ಹೆಚ್ಚಾಗಿರೋಕೆ ಮಾಜಿ ಮುಖ್ಯಮಂತ್ರಿ ಎಸ್.ಎಮ್.ಕೃಷ್ಣಾ ಅವರ ದೂರ ದೃಷ್ಟಿಯೇ ಕಾರಣ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ಬ್ಲಾಕ್ ಕಾಂಗ್ರೆಸ್...
- Advertisement -

More Articles Like This

- Advertisement -
close
error: Content is protected !!
Join WhatsApp Group