ಬೀದರ – ಭಾಲ್ಕಿ ತಾಲೂಕಿನ ಖಾನಾಪುರ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಯೋಧನೊಬ್ಬ ದುರ್ಮರಣ ಹೊಂದಿದ್ದಾರೆ
ಮಹಾರಾಷ್ಟ್ರದ ಲಾತುರ್ ಜಿಲ್ಲೆಯ ಹನುಮಾನ್ ಜೇವಳಗಾ ಗ್ರಾಮದ ಯೋಗೇಶ ಬಾಲಾಜಿ (28) ಮೃತ ಸೈನಿಕ.
ಎದೆ ಝಲ್ ಎನಿಸುವ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಟ್ರಾಕ್ಟರ್ ಒಂದು ರಸ್ತೆಯಲ್ಲಿ ಯೂ ಟರ್ನ್ ತೆಗೆದುಕೊಳ್ಳುವಾಗ ಅತಿ ವೇಗದಿಂದ ಬಂದ ಬೈಕ್ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದು ಮೇಲಿಂದ ಹಾರಿಬಿದ್ದ ಸವಾರರು. ಇದರಿಂದ ಸವಾರ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಹಿಂಬದಿಯಲ್ಲಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡು ಸ್ಥಿತಿ ಚಿಂತಾಜನಕವಾಗಿದೆ.
ಮಹಾರಾಷ್ಟ್ರದಿಂದ ಬೀದರ್ ನಗರಕ್ಕೆ ಆಗಮಿಸುವಾಗ ಈ ಭೀಕರ ಅಪಘಾತ ಸಂಭವಿಸಿದೆ
ಧನ್ನೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ, ಮೃತದೇಹವನ್ನು ಬ್ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಗಾಯಾಳಯವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ವರದಿ : ನಂದಕುಮಾರ ಕರಂಜೆ, ಬೀದರ