spot_img
spot_img

ಸೋನಿಯಾ ಗಾಂಧಿ ಇ.ಡಿ ವಿಚಾರಣೆ: ಕಾಂಗ್ರೆಸ್ ಪ್ರತಿಭಟನೆ

Must Read

ಬೀದರ – ನ್ಯಾಷನಲ್ ಹೆರಾಲ್ಡ್ ಹಗರಣ ಕೇಸಿನ ಪ್ರಯುಕ್ತ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರನ್ನು ಇಡಿ ವಿಚಾರಣೆ ನಡೆಸಿದ ಹಿನ್ನೆಲೆಯಲ್ಲಿ ಬೀದರ್ ನಲ್ಲಿ ಕಾಂಗ್ರೆಸ್ ಪಕ್ಷದ ಬ್ಲಾಕ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಅಂಬೇಡ್ಕರ್ ವ್ರತ್ತದಲ್ಲಿ ಟೆಂಟ್ ಹಾಕಿಕೊಂಡು ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸಂಗ್ರಾಮ ಅವರು, ಕೇಂದ್ರ ಸರಕಾರ ಸೇಡಿನ ರಾಜಕೀಯ ಮಾಡುತ್ತಿದೆ. ಸೋನಿಯಾ ಗಾಂಧಿಯವರ ಆರೋಗ್ಯ ಏರು ಪೇರು ಇದ್ದರೂ ಕೂಡ ಇ.ಡಿ ವಿಚಾರಣೆ ನಡೆಸುತ್ತಿದೆ ಎಂದು ಆರೋಪಿಸಿದರು.

ಸೋನಿಯಾ ಗಾಂಧಿ ದೇಶದ ಜನರಿಗೋಸ್ಕರ ಹಗಲಿರುಳು ಕೆಲಸ ಮಾಡಿದ್ದಾರೆ. ಅವರ ವಿರುದ್ಧ ಬಿಜೆಪಿಯವರು ವಿನಾಕಾರಣ ತನಿಖೆ ಮಾಡುತ್ತಿದ್ದಾರೆ. ನಾವು ಕಾಂಗ್ರೆಸ್ ಪಕ್ಷದ ಬೆದರಿಕೆಗೆ ಹೆದರುವುದಿಲ್ಲ. ಬಿಜೆಪಿ ದ್ವೇಷದ ರಾಜಕಾರಣ ಮಾಡಿದರೆ ನಾವು ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಪಕ್ಷದ ಉಸ್ತುವಾರಿ ಡಾ. ಶರಣ ಪಾಟೀಲ ಸೇಡಂ ಅವರು ನೇತ್ರತ್ವದಲ್ಲಿ ಈ ಪ್ರತಿಭಟನೆ ನಡೆಯಿತು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಸಿಂದಗಿ: ಪಟ್ಟಣದ ಭೀಮಾಶಂಕರ ಮಠದಲ್ಲಿ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಮಾಡಲಾಯಿತು. ಸಮಾರಂಭದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿದ್ದ ಕೊಗಟನೂರ ಪೂಜ್ಯಶ್ರೀ...
- Advertisement -

More Articles Like This

- Advertisement -
close
error: Content is protected !!